ತಾವು ರಾಜಕೀಯಕ್ಕೆ ಹೋಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷದ ಪ್ರಚಾರವೂ ಮಾಡುವುದಿಲ್ಲ ಎಂದು ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಸಲ್ಮಾನ್ ಖಾನ್ ರಾಜಕೀಯಕ್ಕೆ ಪ್ರವೇಶಿಸುತ್ತಾರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.


COMMERCIAL BREAK
SCROLL TO CONTINUE READING

ವದಂತಿಗಳಿಗೆ ತಿರುಗೇಟು ನೀಡಿರುವ ಸಲ್ಮಾನ್, "ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ ಪ್ರಚಾರ ಮಾಡುತ್ತಿಲ್ಲ" ಎಂದು ಟ್ವೀಟ್ನಲ್ಲಿ ಹೇಳಿದರು.



ಮಧ್ಯಪ್ರದೇಶದ ಇಂಧೋರ್ ನಲ್ಲಿ ಸಲ್ಮಾನ್ ಖಾನ್ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಸಲ್ಮಾನ್ ಖಾನ್ ಇಂಧೋರ್ ನಲ್ಲಿ ಜನಿಸಿದರು ಎಂಬುದು ಗಮನಾರ್ಹವಾಗಿದೆ.


ಪಿಟಿಐಗೆ ಮಾತನಾಡಿದ್ದ ಕಾಂಗ್ರೆಸ್ ವಕ್ತಾರ ಪಂಕಜ್ ಚತುರ್ವೇದಿ, ಕಾಂಗ್ರೆಸ್ ನಾಯಕರು ಇಂದೋರ್ನಲ್ಲಿ ಪಕ್ಷದ ಪ್ರಚಾರಕ್ಕಾಗಿ ಬಾಲಿವುಡ್ ಸೂಪರ್ಸ್ಟಾರ್ ಗಳನ್ನೂ ಕರೆತರುವುದಾಗಿ ಹೇಳಿದ್ದರು.