ಬೆಂಗಳೂರು : ನಾನು ಕರ್ನಾಟಕದ ಮುಖ್ಯಮಂತ್ರಿಯಾಗಬೇಕು, ನಾನು ಚುನಾವಣೆಗೆ ನಿಲ್ಲಬೇಕೆಂದು ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಈ ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೊಂಡು ಬಂದಿರುವ ಅವರು(Real Star Upendra) ಈಗ ಸುದೀರ್ಘ ಪತ್ರವೊಂದನ್ನ ಬರೆದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಪತ್ರದಲ್ಲಿ ಏನಿದೆ ಅನ್ನೋದು ಇಲ್ಲಿದೆ ನೋಡಿ..


ಇದನ್ನೂ ಓದಿ : Arijit Singh Mother : ಬಾಲಿವುಡ್ ಖ್ಯಾತ ಸಿಂಗರ್ ಅರ್ಜಿತ್​ ಸಿಂಗ್​ ತಾಯಿ ಕೊರೋನಾಗೆ ಬಲಿ..!


ಸಮಾಜ ಸೇವೆ ಮಾಡ್ತಿದ್ದೀನಿ. ರೈತರಿಂದ ಬೆಳೆ ಕೊಂಡು ಉಚಿತವಾಗಿ ಕಷ್ಟದಲ್ಲಿರೋರಿಗೆ ಹಂಚಿದ್ತಿನಿ. ಚುನಾವಣೆ(Election) ಸಮಯದಲ್ಲಿ ಹೋರಾಟಾನೂ ಮಾಡ್ತೀನಿ. ಆಡಳಿತ, ವಿಪಕ್ಷ ಜನರಿಗೆ ಏನೂ ಮಾಡ್ದೆ ಸಂಪೂರ್ಣ ವಿಫಲ ಆಗಿದೆ ಅಂತಾ ಮಾಧ್ಯಮದಲ್ಲಿ ಕೂಗಿ ಹೇಳ್ತಿನಿ. ಇವರನೆಲ್ಲಾ ಕಿತ್ತಾಕಿ ನನಗೆ ಒಂದು ಅವಕಾಶ ಕೊಡಿ.


Kangana Ranaut: 'ಒಂದು ವೇಳೆ ನೀವು ಧಣಿಗಳಾಗಿದ್ದರೆ, ಬಡವರ ಬಳಿ ಭಿಕ್ಷೆ ಕೇಳಬೇಡಿ'


ನಿಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಕೆಲಸ ಮಾಡ್ತಿನಿ. ಹಗಲು ರಾತ್ರಿ ಕಷ್ಟಪಟ್ಟು ಸುವರ್ಣ ಕರ್ನಾಟಕ ಮಾಡ್ತೀನಿ. ನನ್ನನ್ನು ಗೆಲ್ತಿಸ್ತೀರಾ? ನಾನು ಎಲೆಕ್ಷನ್ ಗೆ ನಿಲ್ಲಲ್ಲ. ಹಾಗಾದ್ರೆ ಉತ್ತಮ ಪ್ರಜಾಕೀಯ ಪಕ್ಷ(Prajakeeya Party) ಯಾಕೇ ? ಅಂತ ಕೇಳ್ತೀರಾ ? ಪ್ರಜಾಕೀಯದಿಂದ ದೊಡ್ಡ ಸಮಾಜ ಸೇವೆ ಮಾಡಿ ಹೆಸರು ಮಾಡಿರೋರು ಫೇಮಸ್ ವ್ಯಕ್ತಿಗಳು ಮೇಲೆ ಹೇಳಿದ ಯಾವ ಕ್ವಾಲಿಟೀ ಇರೋ ನಾಯಕರು ನಿಲ್ಲಲ್ಲ, ದೊಡ್ಡ ನಾಯಕರನ್ನ ಕೊಡೋದು ರಾಜಕೀಯ ! ಪ್ರಜಾಕೀಯದಲ್ಲಿ ನಿಮಗೆ ಗೊತ್ತಿಲ್ಲದಿರೊ ಸಾಮಾನ್ಯರು ಚುನಾವಣೆಗೆ ನಿಲ್ತಾರೆ.,ಬರೀ ಪ್ರಜಾಕೀಯ ವಿಚಾರ ತಳ್ಕೊಂಡು ಓಟ್ ಹಾಕಿ ಅವರಿಗೆ ಕೆಲಸ ಕೊಟ್ರೆ ನಿಮ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನಿಮಗೆ ಬೇಕಾದ ಕೆಲಸ ಪೈಸ ಪೈಸ ಲೆಕ್ಕ ಕೊಟ್ಟು ಸಂಪೂರ್ಣ ಪಾರದರ್ಶಕತೆಯಿಂದ ಮಾಡ್ತಾರೆ.


ಇದನ್ನೂ ಓದಿ : Neha Kakkar ಬರ್ತ್ ಡೇ ಮರೆತ ಪತಿ ರೋಹನ್ ಪ್ರೀತ್, ಮುಂದೆ..?


ಪ್ರಜಾಕೀಯದ (SOP) ಕಾರ್ಯವೈಖರಿ ತರ ಕೆಲಸ ಮಾಡ್ಲಿಲ್ಲ, ನಿಮಗೆ ಅವನ/ಅವಳ ಕೆಲಸ ಇಷ್ಟ ಆಗ್ಲಿಲ್ಲ ಅಥವಾ ಹಣ, ಅಧಿಕಾರದ ಆಸೆಗೆ ಬೇರೆ ಪಕ್ಷದ ಜೊತೆ ಜಂಪ್ ಆಗೋಕೆ ಹೋದ್ರೆ CM ಆಗಿ ನಿಮ್ ಜೊತೆ ನಿಲ್ತೀನಿ, ನಿಮ್ ಜೊತೆ ಉಗ್ರ ಹೋರಾಟ ಮಾಡಿ, ಅಂತಾ ಭ್ರಷ್ಟ ಪ್ರತಿನಿಧಿ ರಾಜೀನಾಮೆ ಕೊಡೋತರ ಮಾಡ್ತೀನಿ. ಈ ವ್ಯವಸ್ಥೆ ಸರೀ ಹೋಗೋಕೆ ಎರಡು ಎಲೆಕ್ಷನ್ ಜಾಸ್ತಿ ಆಗ್ಲಿ ಜನಕ್ಕೆ ಪ್ರಜಾಪ್ರಭುಗಳಿಗೆ ಅಭ್ಯರ್ಥಿ ಇಷ್ಟ ಆಗ್ದಿದ್ರೆ ಅವನು/ ಅವಳು ಕೆಳಗಿಳೀಬೇಕು ಅಂತಾ ಕಾನೂನು ಬರ್ಬೇಕು. ಅದಕ್ಕೆ ನಿಮ್ ಜೊತೆ ನಾನು ಯಾವಾಗ್ಲೂ ಇರೋ permanent CM (ಕಾಮನ್ ಮೆನ್) ಜನ ಸಾಮಾನ್ಯ … ? ಇಲ್ಲ ಇಲ್ಲ …. ಜನ ಅಸಾಮಾನ್ಯರಲ್ಲಿ ಒಬ್ಬನಾಗಿರ್ತೀನಿ. ಸರೀನಾ ? ಎಂದು ಪಾತ್ರದ ಮೂಲಕ ಹೇಳಿಕೊಂಡಿದ್ದಾರೆ.


ಇದನ್ನೂ ಓದಿ : ಆನ್ ಲೈನ್ ನಲ್ಲಿ ಲೀಕ್ ಆದ Radhe, ಸಲ್ಮಾನ್ ಕೊಟ್ಟ ಎಚ್ಚರಿಕೆ ಏನು ಗೊತ್ತೇ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.