ನವದೆಹಲಿ: ಮಹಾರಾಷ್ಟ್ರ ರಾಜ್ಯಸಭಾ ಚುನಾವಣೆಯಲ್ಲಿ ಆರನೇ ಸ್ಥಾನದಿಂದ ತಮ್ಮ ಪಕ್ಷದ ಅಭ್ಯರ್ಥಿ ಸಂಜಯ್ ಪವಾರ್ ಸೋಲಿನ ಬಗ್ಗೆ ಮಾತನಾಡುತ್ತಾ ಎರಡು ದಿನ ಇಡಿ ನಮ್ಮ ಕೈಗೆ ನೀಡಿದರೆ ದೇವೇಂದ್ರ ಫಡ್ನವಿಸ್ ಕೂಡ ಉದ್ಧವ್ ಠಾಕ್ರೆಗೆ ಮತ ಹಾಕುತ್ತಾರೆ ಎಂದು ಹೇಳಿದ್ದಾರೆ.ಬಿಜೆಪಿ ಆರು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಸಂಜಯ್ ರಾವತ್ ಅವರ ಹೇಳಿಕೆ ಬಂದಿದೆ.
ಮಹಾರಾಷ್ಟ್ರ ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಲು ಸ್ವತಂತ್ರರು ಮತ್ತು ಸಣ್ಣ ಪಕ್ಷಗಳ ಮೇಲೆ ಒತ್ತಡ ಹೇರಲು ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ರಾವತ್ ಆರೋಪಿಸಿದ್ದರು.
ಇದನ್ನೂ ಓದಿ:ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಪ್ರತಿಭಟನೆ
ಮಹಾರಾಷ್ಟ್ರ ರಾಜ್ಯಸಭಾ ಚುನಾವಣೆಯಲ್ಲಿ 2022ರಲ್ಲಿ, ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಾಜಿ ರಾಜ್ಯ ಸಚಿವ ಅನಿಲ್ ಬೋಂಡೆ ಮತ್ತು ಬಿಜೆಪಿಯಿಂದ ಧನಂಜಯ್ ಮಹಾದಿಕ್ ಗೆಲುವು ಸಾಧಿಸಿದರೆ, ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಯಿಂದ ಕ್ರಮವಾಗಿ ಸಂಜಯ್ ರಾವುತ್, ಇಮ್ರಾನ್ ಪ್ರತಾಪ್ಗರ್ಹಿ ಮತ್ತು ಪ್ರಫುಲ್ ಪಟೇಲ್ ಅವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ ಸಂಜಯ್ ರಾವತ್ ಅವರು ಇದನ್ನು ಕುದುರೆ ವ್ಯಾಪಾರದ ಜನಾದೇಶ ಎಂದು ಕರೆದಿದ್ದಾರೆ.ಅಷ್ಟೇ ಅಲ್ಲದೆ ಚುನಾವಣಾ ಆಯೋಗವು ಕೂಡ ಬಿಜೆಪಿ ಪರವಾಗಿ ಒಲವನ್ನು ತೋರುತ್ತಿದೆ ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ರಾಷ್ಟ್ರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.