ಇಂಡಿಯನ್ 2 ಸಿನಿಮಾದ ಮೊದಲ ಹಾಡು ರಿಲೀಸ್..ಕುದರೆ ಏರಿ ಬಂದ ಕಮಲ್ ಹಾಸನ್
Indian 2 : ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
Indian 2 movie's first song release : ಇಂಡಿಯನ್ 2 ಸಿನಿಮಾದ ಸೌರಾ ಎಂಬ ಹಾಡು ಅನಾವರಣಗೊಂಡಿದೆ. ಕುದುರೆ ಏರಿ ಬರುವ ಸೇನಾಪತಿ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು,ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.
ಇಂಡಿಯನ್ 1 ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರ ನಿಭಾಯಿಸಿದ್ದರು. ಇಂಡಿಯನ್ 2: 1996 ರ ಹಿಟ್ ಚಲನಚಿತ್ರ ಇಂಡಿಯನ್‌ನ ಮುಂದುವರಿದ ಭಾಗವಾಗಿದ್ದು, ಇದರಲ್ಲೂ ಕಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
ಇದನ್ನು ಓದಿ :ಈಗ ಬಂದು ಅಪ್ಪ ಅಂದ್ರೆ ಒಪ್ಪಿಕೊಳ್ಳಲು ನಾನು ರೆಡಿ ಇಲ್ಲ: ಅನುಶ್ರೀ ರಿಯಲ್ ತಂದೆ ಯಾರು ಗೊತ್ತೇ?
ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ , ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.
ಇದನ್ನು ಓದಿ :ಮೋದಿ ಅಲೆ ಕಾಣಲಿಲ್ಲ, ಎಲ್ಲೆಡೆ ಇರೋದು ಗ್ಯಾರಂಟಿ ಅಲೆ.. 20 ಸ್ಥಾನದಲ್ಲಿ ಗೆಲುವು ಖಚಿತ: ಈಶ್ವರ ಖಂಡ
ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ. ಈ ಚಲನಚಿತ್ರವನ್ನು ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ನಿರ್ಮಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.