ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ 'ವೆಂಕ್ಯಾ' ಸಿನಿಮಾ ಪ್ರದರ್ಶನ

International Goa Film Festival: ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ.

Edited by - Bhavishya Shetty | Last Updated : Oct 25, 2024, 08:16 PM IST
    • ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ.
    • ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ
ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ 'ವೆಂಕ್ಯಾ' ಸಿನಿಮಾ ಪ್ರದರ್ಶನ title=
File Photo

ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ವೆಂಕ್ಯಾ ಸಿನಿಮಾ ಆಯ್ಕೆಯಾಗಿದೆ. 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

ಇದನ್ನೂ ಓದಿ: ರಾತ್ರಿ ಊಟದಲ್ಲಿ ಈ ತರಕಾರಿ ತಿಂದರೆ ಸಾಕು.. ಬೆಳಗಾಗುವಷ್ಟರಲ್ಲೇ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್‌ ಶುಗರ್‌ !

ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಸಾಗರ್ ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

ಉತ್ತರ ಕರ್ನಾಟಕ ಕಥೆಯಾಧಾರಿಸಿತ ವೆಂಕ್ಯಾ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡುತ್ತಿದ್ದಾ. ಪವನ್ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.

ಇದನ್ನೂ ಓದಿ: ಪ್ರಿಯಕರನ ಮುಂದೆ ಕಾರಲ್ಲಿ ಯುವತಿಯ ರೇಪ್‌ : 10 ವರ್ಷದ ನಂತರ ಆರೋಪಿಗಳಿಗೆ ಶಿಕ್ಷೆ

ಗೋವಾ ಫಿಲ್ಮ್ ಫೆಸ್ಟಿವಲ್ನಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ. ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಚಿತ್ರವಿದೆ.  ಭಾರತದ ಜನಪ್ರಿಯ ಸಿನಿಮಾಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಮಲಯಾಳ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಯ ಸಿನಿಮಾಗಳು ಪ್ರದರ್ಶನ ಕಾಣಲಿವೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News