ಮುಂಬೈ: ಬಾಲಿವುಡ್ ನಟಿ ತಾಪ್ಸಿ ಪನ್ನು ಹಾಗೂ ನಿರ್ದೇಶಕ ಅನುರಾಗ್ ಕಶ್ಯಪ್ ಮನೆ, ಕಚೇರಿ ಮೇಲಿನ ಆದಾಯ ತೆರಿಗೆ(IT) ಅಧಿಕಾರಿಗಳ ದಾಳಿ ಭಾರಿ ಸಂಚಲನ ಸೃಷ್ಟಿಸಿತ್ತು. ಮಾ.03 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದು ಪರ ವಿರೋಧಕ್ಕೂ ಕಾರಣವಾಗಿತ್ತು. ಇದೀಗ ಈ ದಾಳಿಯಲ್ಲಿ ಲೆಕ್ಕಕ್ಕೆ ಸಿಗದ, ತೆರಿಗೆ ವಂಚಿಸಿದ ಬರೋಬ್ಬರಿ 350 ಕೋಟಿ ರೂಪಾಯಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಅನುರಾಗ್ ಕಶ್ಯಪ್(Anurag Kashyap) ಹಾಗೂ ಸ್ನೇಹಿತರು ಆರಂಭಿಸಿರುವ ಫ್ಯಾಂಟಮ್ ಫಿಲ್ಮ್ ಪ್ರೊಡಕ್ಷನ್ ಕಂಪನಿ ತೆರಿಗೆ ವಂಚನೆಯಲ್ಲಿ ಬಹುಪಾಲು ಹೊಂದಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ. ಬಾಕ್ಸ್ ಆಫೀಸ್‌ನಿಂದ ಗಳಿಕೆಗೂ ತೋರಿಸಿರುವ ಆದಾಯಕ್ಕೂ ವ್ಯತ್ಯಾಸವಿದೆ. ಫ್ಯಾಂಟಮ್ ಪ್ರೊಡಕ್ಷನ್ ಕಂಪನಿ, ನಟಿ ತಾಪ್ಸಿ ಪನ್ನು ಒಟ್ಟು 350 ಕೋಟಿ ರೂಪಾಯಿ ಆದಾಯ ತೆರಿಗೆ ವಂಚಿಸಿರುವುದು ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.


ತಾಯಿಯಾಗಲಿರುವ ಸಂಭ್ರಮದಲ್ಲಿ ಗಾಯಕಿ ಶ್ರೇಯಾ ಘೋಷಲ್


ಐಟಿ ಅಧಿಕಾರಿಗಳು ಮುಂಬೈ ಮತ್ತು ಪುಣೆಯ 30 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. ಪುಣೆಯಲ್ಲಿ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದ ನಿರ್ದೇಶಕ ಅನುರಾಗ್ ಹಾಗೂ ನಟಿ ತಾಪ್ಸಿ ಪನ್ನು(Tapsee Pannu) ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆರೋಪಿಸಿತ್ತು.


Viral Video: Kareena Kapoor ಮಗನಿಗಾಗಿ ಭಾರೀ ಉಡುಗೊರೆ ತಂದ Karan Johar


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.