ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಸ್ಯಾಂಡಲ್‍ವುಡ್‍ನ ಹಲವು ಕಲಾವಿದರ ಮತ್ತು ನಿರ್ಮಾಪಕರ ಮನೆ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಮುಂಜಾನೆ ದಾಳಿ ನಡೆಸಿರುವ ಐಟಿ ಆಧಿಕಾರಿಗಳು ಹೆಸರಾಂತ ನಿರ್ಮಾಪಕರ ಮ‌ನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. 


ಪುನೀತ್ ರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ಮನೆ ಮೇಲೂ ದಾಳಿ ನಡೆಸಲಾಗಿದೆ.


ಮಹಾಲಕ್ಷ್ಮಿ ಲೇಔಟ್‌ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಕಡೆ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.