ರಶ್ಮಿಕಾ, ಶ್ರೀಲೀಲಾ ಬೆನ್ನಲ್ಲೇ ಬಾಲಿವುಡ್’ಗೆ ಕನ್ನಡದ ಖ್ಯಾತ ನಿರ್ಮಾಪಕಿ ಎಂಟ್ರಿ… ಯಾರು ಆ ಬ್ಯೂಟಿ!!

Iti Acharya: ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು.

Written by - Bhavishya Shetty | Last Updated : Jul 15, 2024, 05:20 PM IST
    • ಇತಿ ಆಚಾರ್ಯ ನಟನೆ ಜೊತೆಗೆ ಮಾಡೆಲಿಂಗ್ನಲ್ಲಿ ಮಿಂಚುತ್ತಿದ್ದಾರೆ
    • ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ
    • ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿ
ರಶ್ಮಿಕಾ, ಶ್ರೀಲೀಲಾ ಬೆನ್ನಲ್ಲೇ ಬಾಲಿವುಡ್’ಗೆ ಕನ್ನಡದ ಖ್ಯಾತ ನಿರ್ಮಾಪಕಿ ಎಂಟ್ರಿ… ಯಾರು ಆ ಬ್ಯೂಟಿ!! title=
Ithi Acharya

ಇತಿ ಆಚಾರ್ಯ ನಟನೆ ಜೊತೆಗೆ ಮಾಡೆಲಿಂಗ್ನಲ್ಲಿ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?

ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರಿಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ.

ಇತಿ ಆಚಾರ್ಯ ತಮ್ಮ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಅಪ್ ಡೇಟ್ ಹಂಚಿಕೊಂಡಿದ್ದಾರೆ. "ದಿ ಶೂಸ್ ಐ ವೋರ್" ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ಇನ್ನಮುಲ್ಕ್ ಮತ್ತು ಸ್ಕ್ಯಾಮ್ ಖ್ಯಾತಿಯ ಫೈಸಲ್ ರಶೀದ್ ಗೆ ಜೋಡಿಯಾಗಿ ಕನ್ನಡತಿ ಅಭಿನಯಿಸಲಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ, 'ನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾ' ಎಂದಿದ್ದಾರೆ.

ಇದನ್ನೂ ಓದಿ: “ನಟ ರಕ್ಷಿತ್ ಶೆಟ್ಟಿ ಜೊತೆ ನನ್ನ ಮದುವೆಯಾಗಿದೆ”- ಆ್ಯಂಕರ್ ಅನುಶ್ರೀ ಸೆನ್ಸೇಷನಲ್ ಹೇಳಿಕೆ ವೈರಲ್

ಇತಿ ಆಚಾರ್ಯ, ಕನ್ನಡದಲ್ಲಿ ಕವಚ, ಧ್ವನಿ, ಡೀಲ್‌ ರಾಜಾ, ಪಂಗನಾಮ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದೇ ರೀತಿ ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News