'ಜೈ ಭೀಮ್' ಪ್ರಕರಣ: ನಟ ಸೂರ್ಯ ಉತ್ತರಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ

Jai Bhim Movie : ಜೈ ಭೀಮ್ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.  

Written by - Chetana Devarmani | Last Updated : Aug 22, 2023, 02:52 PM IST
  • ನಟ ಸೂರ್ಯ ಅಭಿನಯದ ಜೈ ಭೀಮ್‌ ಸಿನಿಮಾ
  • ಜೈ ಭೀಮ್ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ
  • ನಟ ಸೂರ್ಯ ಉತ್ತರಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ
'ಜೈ ಭೀಮ್' ಪ್ರಕರಣ: ನಟ ಸೂರ್ಯ ಉತ್ತರಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ   title=

Jai Bhim Movie controversy : ಜೈ ಭೀಮ್ ಚಿತ್ರದಲ್ಲಿ ಅಲೆಮಾರಿ ಸಮುದಾಯವನ್ನು ಅವಹೇಳನ ಮಾಡಿದ್ದಕ್ಕಾಗಿ ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ಅವರಿಗೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

2021 ರಲ್ಲಿ ರಿಲೀಸ್‌ ಆದ ಜೈ ಭೀಮ್‌ ಸಿನಿಮಾ ಅಲೆಮಾರಿ ಸಮುದಾಯವನ್ನು ತಪ್ಪಾಗಿ ಪ್ರತಿನಿಧಿಸುತ್ತಿದೆ ಎಂದು ಆರೋಪಿಸಲಾಗಿದೆ. ನಂತರ ಅಲೆಮಾರಿ ಬುಡಕಟ್ಟುಗಳ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಮುರುಗೇಶನ್ ಚೆನ್ನೈನ ಕೇಂದ್ರ ಅಪರಾಧ ವಿಭಾಗದ ಪೊಲೀಸರಿಗೆ ದೂರು ಸಲ್ಲಿಸಿ, ‘ಜೈ ಭೀಮ್’ ಚಿತ್ರದ ನಟ ಸೂರ್ಯ ಮತ್ತು ನಿರ್ದೇಶಕ ಟಿ.ಎಸ್.ಜ್ಞಾನವೇಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಕಲರ್‌ ಕಲರ್‌ ಸೀರೆಯಲ್ಲಿ ʼಅನುಪಮಾʼ : ಕ್ಯೂಟ್‌ ಕುಟ್ಟಿ ಫೋಟೋಸ್‌ ಇಲ್ಲಿವೆ 

ದೂರಿನ ಕುರಿತು ಕ್ರಮ ಕೈಗೊಳ್ಳುವಂತೆ ಮುರುಗೇಶನ್ ಸಲ್ಲಿಸಿದ್ದ ಅರ್ಜಿಯನ್ನು ಎಗ್ಮೋರ್ ಕೋರ್ಟ್ ವಜಾಗೊಳಿಸಿತ್ತು. ಇದರ ವಿರುದ್ಧ ಮುರುಗೇಶನ್ ಅವರು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಆದೇಶ ನೀಡುವಂತೆ ಕೋರಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಆರ್.ಹೇಮಲತಾ, ಚೆನ್ನೈ ಪೊಲೀಸರು, ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿದರು.

ಜೈ ಭೀಮ್ 1993 ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಚಿತ್ರ. ಈ ಚಿತ್ರದಲ್ಲಿ “ಜಾತಿ ದಬ್ಬಾಳಿಕೆ ನಡೆಸುತ್ತಿರುವ ಅಧಿಕಾರಿಗಳು ದಮನಿತ ಜಾತಿಗೆ ಸೇರಿದವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ..” ಎಂಬಂತಹ ಕೆಲವು ದೃಶ್ಯಗಳಿವೆ.

ಜೈ ಭೀಮ್ ಚಿತ್ರ ಬಿಡುಗಡೆಯಾದ ನಂತರ ಚಿತ್ರದ ಕಥೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಅದರಲ್ಲೂ ಕೆಲವು ರಾಜಕೀಯ ಪಕ್ಷದ ಮುಖಂಡರು ಹಾಗೂ ಪ್ರಮುಖ ರಾಜಕೀಯ ವ್ಯಕ್ತಿಗಳು ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆದರೆ, ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

‘ಜೈ ಭೀಮ್’ ಚಿತ್ರವು ಕೆಲವು ಜಾತಿಗಳ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದಾದ ನಂತರ ಚಿತ್ರದ ನಿರ್ದೇಶಕ ಜ್ಞಾನವೇಲ್ ಈ ಬಗ್ಗೆ ವಿವರಣೆ ನೀಡಿ ಕ್ಷಮೆ ಯಾಚಿಸಿದ್ದರು. ಯಾವುದೇ ನಿರ್ದಿಷ್ಟ ಸಮುದಾಯ ಅಥವಾ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶದಿಂದ ಸಿನಿಮಾ ಮಾಡಿಲ್ಲ ಎಂದು ಅವರು ತಮ್ಮ ವಿವರಣೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಯೋಗಿ ಜೀ ಕಾಲಿಗೆ ಬಿದ್ದಿದ್ದಕ್ಕೆ ಟ್ರೋಲ್‌..! ಮುಟ್ಟಿನೋಡಿಕೊಳ್ಳುವಂತೆ ಉತ್ತರಿಸಿದ ತಲೈವಾ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News