‘ಜವಾನ್’ ಟ್ರೈಲರ್ ಬಿಡುಗಡೆ; ಸೋಶಿಯಲ್ ಮೀಡಿಯಾ ಜಗತ್ತಿಗೆ ಕಾಲಿಟ್ಟ ನಯನತಾರಾ!

Nayanthara: ತಮ್ಮ ಮೊದಲ ಪೋಸ್ಟ್‍ನಲ್ಲಿ ನಟಿ ನಯನತಾರಾ ‘ಜವಾನ್’ ಸಿನಿಮಾದ ಟ್ರೈಲರ್ ಹಂಚಿಕೊಂಡಿರುವ ನಟಿ, ಬಳಿಕ ಅವಳಿ ಮಕ್ಕಳ ಜೊತೆಯಿರುವ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Sep 2, 2023, 02:59 PM IST
  • ಇನ್ಸ್ಟಾಗ್ರಾಮ್‍ನಲ್ಲಿ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಸೋಷಿಯಲ್ ಮೀಡಿಯಾಗೆ ನಯನತಾರಾ ಎಂಟ್ರಿ
  • ಹೊಸ ಖಾತೆ ಕ್ರಿಯೇಟ್ ಮಾಡಿದ ಕೆಲವೇ ಗಂಟೆಯಲ್ಲಿ 1.5 ಮಿಲಿಯನ್ ಫಾಲೋವರ್ಸ್ ಗಳಿಸಿದ ನಟಿ
  • ‘ಜವಾನ್’ ಟ್ರೈಲರ್ ಜೊತೆಗೆ ಅವಳಿ ಮಕ್ಕಳ ಜೊತೆಯಿರುವ ಮುದ್ದಾದ ಫೋಟೋ ಹಂಚಿಕೊಂಡ ನಟಿ
 ‘ಜವಾನ್’ ಟ್ರೈಲರ್ ಬಿಡುಗಡೆ; ಸೋಶಿಯಲ್ ಮೀಡಿಯಾ ಜಗತ್ತಿಗೆ ಕಾಲಿಟ್ಟ ನಯನತಾರಾ!  title=
ಸೋಷಿಯಲ್ ಮೀಡಿಯಾಗೆ ನಯನತಾರಾ ಎಂಟ್ರಿ!

ನವದೆಹಲಿ: ಮೊದಲ ನೋಟದಿಂದಲೇ ಪ್ರೇಕ್ಷಕರ ಗಮನ ಸೆಳೆದಂತಹ ಸೂಪರ್ ಸ್ಟಾರ್ ಶಾರೂಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಬಿಡುಗಡೆಗೆ ಇನ್ನೊಂದೇ ವಾರವಿದ್ದರೂ, ಚಿತ್ರದ ಟ್ರೈಲರ್ ಬಿಡುಗಡೆಯಾಗಿಲ್ಲವೆಂದು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗಾಗಿ ಚಿತ್ರತಂಡದವರು ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಆ ಕುತೂಹಲವನ್ನು ತಣಿಸಿದ್ದಾರೆ.

ವಿಶೇಷವೆಂದರೆ ಈ ಟ್ರೈಲರ್ ಬಿಡುಗಡೆ ಮಾಡಿರುವುದು ಚಿತ್ರದ ನಾಯಕಿ ನಯನತಾರಾ. ಇನ್ಸ್ಟಾಗ್ರಾಮ್‍ನಲ್ಲಿ ‘ಜವಾನ್’ ಚಿತ್ರದ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ನಯನತಾರಾ ಸೋಷಿಯಲ್ ಮೀಡಿಯಾಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನೆಚ್ಚಿನ ನಟಿಯ ಚಿತ್ರವೊಂದರ ಟ್ರೈಲರ್ ಬಿಡುಗಡೆ ಆಗಿರುವುದು ಖುಷಿಯಾದರೆ, ನಯನತಾರಾ ಸೋಷಿಯಲ್ ಮೀಡಿಯಾಗೆ ಬಂದಿರುವುದು ಅವರ ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟುಗೊಳಿಸಿದೆ.   

 
 
 
 

 
 
 
 
 
 
 
 
 
 
 

A post shared by N A Y A N T H A R A (@nayanthara)

ಇದನ್ನೂ ಓದಿ: Jailer : ಜೈಲರ್‌ ಒಟಿಟಿ ಎಂಟ್ರಿ ಕನ್ಫರ್ಮ್‌...ತಿಂಗಳಿಗೂ ಮೊದಲೇ ಡಿಜಿಟಲ್‌ ಅಂಗಳಕ್ಕೆ ಕಾಲಿಟ್ಟಿದ್ದೇಕೆ..?

ಈ ಟ್ರೈಲರ್‍ನಲ್ಲಿ ರೋಚಕವೆನಿಸುವಂತಹ ಸಾಹಸಮಯ ದೃಶ್ಯಗಳು, ಎದೆ ಝಲ್ಲೆನಿಸುವ ಆಕ್ಷನ್ ದೃಶ್ಯಗಳು ಹೆಚ್ಚಿದ್ದು, ‘ಜವಾನ್’ ಪ್ರಪಂಚವನ್ನು ತೆರೆದಿಟ್ಟಿದೆ. ಕಣ್ಣು ಸೆಳೆಯುವ ದೃಶ್ಯಗಳಿರುವ ಈ ಟ್ರೈಲರ್ ಪ್ರೇಕ್ಷಕರ ನಿರೀಕ್ಷೆಗಳನ್ನು ಇನ್ನಷ್ಟು ಹೆಚ್ಚಾಗಿಸಿದ್ದು, ಸಿನಿಮಾ ಬಿಡುಗಡೆಗೆ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.

‘ಜವಾನ್' ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿ ಗೌರಿಖಾನ್ ನಿರ್ಮಿಸಿದರೆ, ಗೌರವ್ ವರ್ಮಾ ಸಹ ನಿರ್ಮಾಪಕರಾಗಿದ್ದಾರೆ. ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Kichcha 46: ಕಿಚ್ಚ 46 ಚಿತ್ರದ ಟೈಟಲ್‌ ರಿವೀಲ್‌, ಮತ್ತೆ ಖಾಕಿ ತೊಟ್ಟ ಬಾದ್‌ ಷಾ!

ಸೋಷಿಯಲ್ ಮೀಡಿಯಾಗೆ ಎಂಟ್ರಿ!

ಸಿನಿಮಾ ಮತ್ತು ವೈಯಕ್ತಿಕ ಜೀವನದಲ್ಲಿ ಆ್ಯಕ್ಟೀವ್ ಆಗಿದ್ದ ನಟಿ ನಯನತಾರಾ ಸೋಷಿಯಲ್ ಮೀಡಿಯಾಗಳಿಂದ ದೂರವಿದ್ದರು. ಇದೀಗ ಇನ್ಸ್ಟಾಗ್ರಾಂಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದು, ಹೊಸ ಖಾತೆ ಕ್ರಿಯೇಟ್ ಮಾಡಿದ ಕೆಲವೇ ಗಂಟೆಯಲ್ಲಿ 1.5 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ತಮ್ಮ ಮೊದಲ ಪೋಸ್ಟ್‍ನಲ್ಲಿ ‘ಜವಾನ್’ ಸಿನಿಮಾದ ಟ್ರೈಲರ್ ಹಂಚಿಕೊಂಡಿರುವ ನಟಿ, ಬಳಿಕ ಅವಳಿ ಮಕ್ಕಳ ಜೊತೆಯಿರುವ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News