ʼಶುಗರ್ ಫ್ಯಾಕ್ಟರಿʼಯಲ್ಲಿ ಜಯಂತ ಕಾಯ್ಕಿಣಿ ʼಜಹಾಪನಾʼ ಸಾಂಗ್‌..! ಲವ್‌ ಸಾಂಗ್‌ಗೆ ಮನಸೋತ ಫ್ಯಾನ್ಸ್‌ 

ʼಶುಗರ್ ಫ್ಯಾಕ್ಟರಿʼ ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು "ಜಹಾಪನಾ" ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. 

Written by - YASHODHA POOJARI | Edited by - Krishna N K | Last Updated : Oct 14, 2023, 02:02 PM IST
  • ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರ
  • ಜಯಂತ ಕಾಯ್ಕಿಣಿ "ಜಹಾಪನಾ" ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ
  • ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ
ʼಶುಗರ್ ಫ್ಯಾಕ್ಟರಿʼಯಲ್ಲಿ ಜಯಂತ ಕಾಯ್ಕಿಣಿ ʼಜಹಾಪನಾʼ ಸಾಂಗ್‌..! ಲವ್‌ ಸಾಂಗ್‌ಗೆ ಮನಸೋತ ಫ್ಯಾನ್ಸ್‌  title=
Darling Krishna

Sugar Factory movie : ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು "ಜಹಾಪನಾ" ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 

ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ  ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: Bigg Boss Kannada 10: ಸ್ನೇಕ್‌ ಶ್ಯಾಮ್‌ ತೆರೆದಿಟ್ಟ ವಿಸ್ಮಯಕಾರಿ ಉರಗ ಪ್ರಪಂಚ!

ಈಗಾಗಲೇ "ಶುಗರ್ ಫ್ಯಾಕ್ಟರಿ" ಟ್ರೇಲರ್ ಎಲ್ಲರ ಮನಗೆದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನವೆಂಬರ್ 24 ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ "ಶುಗರ್ ಫ್ಯಾಕ್ಟರಿ" ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸಹ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಆರ್. ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ  ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News