ಧರ್ಮ ಕೈಯಲ್ಲಿ ತಲ್ವಾರ್! ನಾಯಕ್ ನಹೀ ಖಳ್ ನಾಯಕ್ ಅಂದ್ರು ಕ್ಯಾಟ್ಬರೀಸ್ :

Written by - YASHODHA POOJARI | Edited by - Manjunath N | Last Updated : Aug 21, 2023, 04:27 AM IST
  • ಕೆ.ಬಿ. ಪ್ರವೀಣ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಈ ಚಿತ್ರದ ಹಾಡುಗಳ ಹಕ್ಕುಗಳನ್ನು ಈಗಾಗಲೇ ಸರಿಗಮ ಆಡಿಯೋ ಕಂಪನಿ ದೊಡ್ಡ ಮೊತ್ತಕ್ಕೆ ಖರೀದಿಸಿದೆ.
  • ಈ ಚಿತ್ರದಲ್ಲಿ 5 ಭರ್ಜರಿ ಸಾಹಸ ದೃಶ್ಯಗಳಿವೆ. ವಿನೋದ್, ಡ್ಯಾನಿ ಮತ್ತು ಕುಂಫು ಚಂದ್ರು ಅವರುಗಳು ಸಾಹಸ ನಿರ್ದೇಶನ ಮಾಡಿದ್ದಾರೆ.
ಧರ್ಮ  ಕೈಯಲ್ಲಿ ತಲ್ವಾರ್! ನಾಯಕ್ ನಹೀ ಖಳ್ ನಾಯಕ್ ಅಂದ್ರು ಕ್ಯಾಟ್ಬರೀಸ್ : title=

ಧರ್ಮ ಕೀರ್ತಿರಾಜ್ ಹಾಗೂ ಅದಿತಿ ಅಭಿನಯದ ತಲ್ವಾರ್ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. 

ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಇರುವ ಸಿನಿಮಾ. ಈ ಚಿತ್ರದಲ್ಲಿ  ಕ್ಯಾಟ್ ಬರೀಸ್ ಎಂದೇ ಕರೆಸಿಕೊಳ್ಳುವ   ಧರ್ಮ ಕೀರ್ತಿರಾಜ್ ಖಳನಟನ  ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಧರ್ಮ ಕೀರ್ತಿರಾಜ್ ಅವರಿಗೂ ಈ ಸಿನಿಮಾ ಹೊಸ ಇಮೇಜ್ ಸಿಗುತ್ತದೆ ಎಂಬ ಭರವಸೆ ಇದೆ.

ಕಥೆ, ಚಿತ್ರಕಥೆ  ಸಂಭಾಷಣೆ ಬರೆದು ರಾಘವ ಮುರಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಮುಮ್ತಾಜ್ ಚಿತ್ರ ನಿರ್ದೇಶಿಸಿದ್ದ ರಾಘವ ಮುರಳಿ ಮತ್ತು ಧರ್ಮ ಕೀರ್ತಿರಾಜ್ ಕಾಂಬಿನೆಷನ್ ನ ಎರಡನೇ ಸಿನಿಮಾ ಇದು.

ಇನ್ನು, ಈ ಚಿತ್ರದಲ್ಲಿ ಮಜಾಭಾರತ ಖ್ಯಾತಿಯ ಮಿನಿ ದರ್ಶನ್ ಎಂದೇ ಕರೆಸಿಕೊಳ್ಳುವ ಅವಿನಾಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಪಡೆಯುತ್ತಿರುವ ಅವಿನಾಶ್, ಮುಖ್ಯ ಪಾತ್ರ ನಿರ್ವಹಿಸಿದ್ದಾರೆ.

ಈ ಚಿತ್ರದ ಮತ್ತೊಂದು ವಿಶೇಷತೆ ಏನೆಂದರೆ ವಿಶೇಷ ಪಾತ್ರದಲ್ಲಿ ಜಯರಾಮ್ ಕಾರ್ತಿಕ್ (JK) ಕಲ್ಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರು ಮಂಗಳೂರಿನ ರೌಡಿ ಕಲ್ಕಿ ಎಂಬ ಪಾತ್ರ ನಿರ್ವಹಿಸುತ್ತಿರುವುದು ವಿಶೇಷತೆಗಳಲ್ಲೊಂದು. 

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ರೈತರ ಮೌನ ಪ್ರತಿಭಟನೆ

ಈ ಚಿತ್ರ ಟಚ್ ಸ್ಟೋನ್ ಪಿಕ್ಚರ್ ಬ್ಯಾನರ್ ನಲ್ಲಿ ನಿರ್ಮಾಣವಾಗಿದ್ದು, ಸುರ್ನಳ್ಳಿ ಜಯರಾಮ್ ಅರ್ಪಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಬೈರಸಂದ್ರ ಬಂಡವಾಳ ಹಾಕಿದ್ದಾರೆ, ಶ್ರೀನಗರ ಕಿಟ್ಟಿ ಅಭಿನಯದ ಬಹುಪರಾಕ್ ಚಿತ್ರಕ್ಕೆ  ಸಹ ನಿರ್ಮಾಪಕರಗಿದ್ದ ಇವರು ಈ ಚಿತ್ರವನ್ನು ತಮ್ಮ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಇವರು ಅನುಭವ ಇರುವ ಛಾಯಾಗ್ರಾಹಕರು ಆಗಿರುವುದರಿಂದ ಈ ಚಿತ್ರಕ್ಕೆ ತಾವೇ ಕ್ಯಾಮರಮಾನ್ ಆಗಿ ತಮ್ಮ ಕೈ ಚಳಕ ತೋರಿಸಿರುವುದು ಮತ್ತೊಂದು ವಿಶೇಷ.

ಕೆ.ಬಿ. ಪ್ರವೀಣ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಈ ಚಿತ್ರದ ಹಾಡುಗಳ ಹಕ್ಕುಗಳನ್ನು ಈಗಾಗಲೇ ಸರಿಗಮ ಆಡಿಯೋ ಕಂಪನಿ ದೊಡ್ಡ ಮೊತ್ತಕ್ಕೆ ಖರೀದಿಸಿದೆ.

ಈ ಚಿತ್ರದಲ್ಲಿ 5 ಭರ್ಜರಿ ಸಾಹಸ ದೃಶ್ಯಗಳಿವೆ.  ವಿನೋದ್, ಡ್ಯಾನಿ ಮತ್ತು ಕುಂಫು ಚಂದ್ರು ಅವರುಗಳು ಸಾಹಸ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Photo Gallery: ತಂದೆಯ ಹುಟ್ಟುಹಬ್ಬದಂದು ಲಡಾಖ್ ಗೆ ಬೈಕ್ ಸವಾರಿ ಹೊರಟ ರಾಹುಲ್ ಗಾಂಧಿ..!

ಈ ಚಿತ್ರದ ಇನ್ನೊಂದು ವಿಶೇಷತೆ ಏನೆಂದರೆ, 'ರೋಜ್ ಹಿಡಿದು ಲವ್ ಮಾಡಿದ್ರೆ ಪ್ರೀತಿಸಿದ ಇಬ್ಬರು ನೋವು ಪಡ್ತಾರೆ, ಆದರೆ ಲಾಂಗ್ ಇಡ್ಕೊಂಡು ಜೀವನ ಮಾಡಿದ್ರೆ ಆ ಲಾಂಗ್ ನಿಂದ ಅದೆಷ್ಟು ಫ್ಯಾಮಿಲಿ ಹಾಳಾಗ್ತವೆ ಎಂಬ ಸಂದೇಶವನ್ನು ಈ ಚಿತ್ರ ದಲ್ಲಿ ಹೇಳಲಾಗಿದೆ. ಇದು ರಕ್ತ ಹರಿಸುವ ರೌಡಿಸಂ ಚಿತ್ರವಾಗಿದ್ದರೂ, ಅಲ್ಲಲ್ಲಿ, ಎಮೋಷನ್ ಟಚ್ ಇದೆ ಎಂಬುದು ಚಿತ್ರ ತಂಡದ ಮಾತು.

ಸದ್ಯ ಯು/ಎ  ಸರ್ಟಿಫಿಕೇಟ್ ಪಡೆದಿರುವ ಈ ಚಿತ್ರ ರಿಲೀಸ್ ಆಗಲು ತಯಾರಿ ನಡೆಸಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ  ಟೀಸರ್ ರಿಲೀಸ್ ಬಿಡುಗಡೆಯಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News