ಧರ್ಮ ಕೀರ್ತಿರಾಜ್ ಹಾಗೂ ಅದಿತಿ ಅಭಿನಯದ ತಲ್ವಾರ್ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. 


COMMERCIAL BREAK
SCROLL TO CONTINUE READING

ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಇರುವ ಸಿನಿಮಾ. ಈ ಚಿತ್ರದಲ್ಲಿ  ಕ್ಯಾಟ್ ಬರೀಸ್ ಎಂದೇ ಕರೆಸಿಕೊಳ್ಳುವ   ಧರ್ಮ ಕೀರ್ತಿರಾಜ್ ಖಳನಟನ  ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಧರ್ಮ ಕೀರ್ತಿರಾಜ್ ಅವರಿಗೂ ಈ ಸಿನಿಮಾ ಹೊಸ ಇಮೇಜ್ ಸಿಗುತ್ತದೆ ಎಂಬ ಭರವಸೆ ಇದೆ.


ಕಥೆ, ಚಿತ್ರಕಥೆ  ಸಂಭಾಷಣೆ ಬರೆದು ರಾಘವ ಮುರಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಮುಮ್ತಾಜ್ ಚಿತ್ರ ನಿರ್ದೇಶಿಸಿದ್ದ ರಾಘವ ಮುರಳಿ ಮತ್ತು ಧರ್ಮ ಕೀರ್ತಿರಾಜ್ ಕಾಂಬಿನೆಷನ್ ನ ಎರಡನೇ ಸಿನಿಮಾ ಇದು.


ಇನ್ನು, ಈ ಚಿತ್ರದಲ್ಲಿ ಮಜಾಭಾರತ ಖ್ಯಾತಿಯ ಮಿನಿ ದರ್ಶನ್ ಎಂದೇ ಕರೆಸಿಕೊಳ್ಳುವ ಅವಿನಾಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಪಡೆಯುತ್ತಿರುವ ಅವಿನಾಶ್, ಮುಖ್ಯ ಪಾತ್ರ ನಿರ್ವಹಿಸಿದ್ದಾರೆ.


ಈ ಚಿತ್ರದ ಮತ್ತೊಂದು ವಿಶೇಷತೆ ಏನೆಂದರೆ ವಿಶೇಷ ಪಾತ್ರದಲ್ಲಿ ಜಯರಾಮ್ ಕಾರ್ತಿಕ್ (JK) ಕಲ್ಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರು ಮಂಗಳೂರಿನ ರೌಡಿ ಕಲ್ಕಿ ಎಂಬ ಪಾತ್ರ ನಿರ್ವಹಿಸುತ್ತಿರುವುದು ವಿಶೇಷತೆಗಳಲ್ಲೊಂದು. 


ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ರೈತರ ಮೌನ ಪ್ರತಿಭಟನೆ


ಈ ಚಿತ್ರ ಟಚ್ ಸ್ಟೋನ್ ಪಿಕ್ಚರ್ ಬ್ಯಾನರ್ ನಲ್ಲಿ ನಿರ್ಮಾಣವಾಗಿದ್ದು, ಸುರ್ನಳ್ಳಿ ಜಯರಾಮ್ ಅರ್ಪಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಬೈರಸಂದ್ರ ಬಂಡವಾಳ ಹಾಕಿದ್ದಾರೆ, ಶ್ರೀನಗರ ಕಿಟ್ಟಿ ಅಭಿನಯದ ಬಹುಪರಾಕ್ ಚಿತ್ರಕ್ಕೆ  ಸಹ ನಿರ್ಮಾಪಕರಗಿದ್ದ ಇವರು ಈ ಚಿತ್ರವನ್ನು ತಮ್ಮ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಇವರು ಅನುಭವ ಇರುವ ಛಾಯಾಗ್ರಾಹಕರು ಆಗಿರುವುದರಿಂದ ಈ ಚಿತ್ರಕ್ಕೆ ತಾವೇ ಕ್ಯಾಮರಮಾನ್ ಆಗಿ ತಮ್ಮ ಕೈ ಚಳಕ ತೋರಿಸಿರುವುದು ಮತ್ತೊಂದು ವಿಶೇಷ.


ಕೆ.ಬಿ. ಪ್ರವೀಣ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಈ ಚಿತ್ರದ ಹಾಡುಗಳ ಹಕ್ಕುಗಳನ್ನು ಈಗಾಗಲೇ ಸರಿಗಮ ಆಡಿಯೋ ಕಂಪನಿ ದೊಡ್ಡ ಮೊತ್ತಕ್ಕೆ ಖರೀದಿಸಿದೆ.


ಈ ಚಿತ್ರದಲ್ಲಿ 5 ಭರ್ಜರಿ ಸಾಹಸ ದೃಶ್ಯಗಳಿವೆ.  ವಿನೋದ್, ಡ್ಯಾನಿ ಮತ್ತು ಕುಂಫು ಚಂದ್ರು ಅವರುಗಳು ಸಾಹಸ ನಿರ್ದೇಶನ ಮಾಡಿದ್ದಾರೆ.


ಇದನ್ನೂ ಓದಿ: Photo Gallery: ತಂದೆಯ ಹುಟ್ಟುಹಬ್ಬದಂದು ಲಡಾಖ್ ಗೆ ಬೈಕ್ ಸವಾರಿ ಹೊರಟ ರಾಹುಲ್ ಗಾಂಧಿ..!


ಈ ಚಿತ್ರದ ಇನ್ನೊಂದು ವಿಶೇಷತೆ ಏನೆಂದರೆ, 'ರೋಜ್ ಹಿಡಿದು ಲವ್ ಮಾಡಿದ್ರೆ ಪ್ರೀತಿಸಿದ ಇಬ್ಬರು ನೋವು ಪಡ್ತಾರೆ, ಆದರೆ ಲಾಂಗ್ ಇಡ್ಕೊಂಡು ಜೀವನ ಮಾಡಿದ್ರೆ ಆ ಲಾಂಗ್ ನಿಂದ ಅದೆಷ್ಟು ಫ್ಯಾಮಿಲಿ ಹಾಳಾಗ್ತವೆ ಎಂಬ ಸಂದೇಶವನ್ನು ಈ ಚಿತ್ರ ದಲ್ಲಿ ಹೇಳಲಾಗಿದೆ. ಇದು ರಕ್ತ ಹರಿಸುವ ರೌಡಿಸಂ ಚಿತ್ರವಾಗಿದ್ದರೂ, ಅಲ್ಲಲ್ಲಿ, ಎಮೋಷನ್ ಟಚ್ ಇದೆ ಎಂಬುದು ಚಿತ್ರ ತಂಡದ ಮಾತು.


ಸದ್ಯ ಯು/ಎ  ಸರ್ಟಿಫಿಕೇಟ್ ಪಡೆದಿರುವ ಈ ಚಿತ್ರ ರಿಲೀಸ್ ಆಗಲು ತಯಾರಿ ನಡೆಸಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ  ಟೀಸರ್ ರಿಲೀಸ್ ಬಿಡುಗಡೆಯಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.