ಬೆಂಗಳೂರು : ವಿಜಯ್ ರಾಘವೇಂದ್ರ ಅಭಿನಯದ, ವಿಜಯ್ ಕನ್ನಡಿಗ ನಿರ್ದೇಶನದ "ಜೋಗ್ 101" ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಜನಮನ್ನಣೆ ಪಡೆಯುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮಾರ್ಚ್ 7ರಂದು ತೆರೆಗೆ ಬರಲಿದೆ.


COMMERCIAL BREAK
SCROLL TO CONTINUE READING

"ಜೋಗ್ 101" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಆಕ್ಷನ್ ಥ್ರಿಲ್ಲರ್ ಚಿತ್ರ. ಈ ಚಿತ್ರದಲ್ಲಿ ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇದೆ. ಅವಿನಾಶ್ ಆರ್ ಬಾಸೂತ್ಕರ್ ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದೆ. ಈ ಹಾಡುಗಳು ಜನ ಮೆಚ್ಚುಗೆ ಕೂಡಾ ಗಳಿಸಿದೆ. ನನ್ನ ಚಿತ್ರಗಳಲ್ಲಿ ಒಂದೆರೆಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದು ಇರಲಿಲ್ಲ. "ಜೋಗ್ 101" ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿದೆ ಎಂದಿದ್ದಾರೆ ಚಿತ್ರದ ನಾಯಕ ಎಂದು ವಿಜಯ್ ರಾಘವೇಂದ್ರ. 


ಇದನ್ನೂ ಓದಿ : Rajanikanth: ಬಡಜನರಿಗಾಗಿ ಆಸ್ಪತ್ರೆ ನಿರ್ಮಾಣ ಮಾಡಲು 12 ಎಕರೆ ಭೂಮಿ ಖರೀದಿಸಿದ ತಲೈವಾ!


ಈ ಚಿತ್ರದ ಕಥೆ ಬರೆದು ನಿರ್ಮಾಪಕರ ಹತ್ತಿರ ಹೋದಾಗ ಕಥೆ ಮೆಚ್ಚಿಕೊಂಡು ಚಿತ್ರ ನಿರ್ಮಾಣಕ್ಕೆ ಮುಂದಾದರು. ಈ ಚಿತ್ರದ ಕಥೆಗೆ ವಿಜಯ್ ರಾಘವೇಂದ್ರ ಅವರೆ ಸೂಕ್ತ ಎಂದು ಅಂದುಕೊಂಡಿದ್ದೆವು. ವಿಜಯ್ ರಾಘವೇಂದ್ರ ಅವರು ಕಥೆ ಕೇಳಿ ನಟಿಸಲು ಒಪ್ಪಿಕೊಂಡರು. ಚಿತ್ರ ಇದೇ 7 ನೇ ತಾರೀಖು ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ವಿಜಯ್ ಕನ್ನಡಿಗ ತಿಳಿಸಿದರು.


ಇದು ನನ್ನ ನಿರ್ಮಾಣದ ಮೊದಲ ಚಿತ್ರ. ಚಿತ್ರತಂಡದ ಸಹಕಾರದಿಂದ "ಜೋಗ್ 101"  ಚೆನ್ನಾಗಿ ಮೂಡಿಬಂದಿದೆ. ಮಾರ್ಚ್‌ 7 ರಂದು ತೆರೆಗೆ ಬರುತ್ತಿರುವ ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಯಶಸ್ವಿ ಮಾಡಿ ಎಂದರು ನಿರ್ಮಾಪಕ ರಾಘು.


ಇದನ್ನೂ ಓದಿ : Rashmika Mandanna : ಜಪಾನ್ ನಲ್ಲಿ ನ್ಯಾಷನಲ್ ಕ್ರಶ್ : ಫೋಟೋಸ್ ಇಲ್ಲಿವೆ


ಮೋಹನ್ ರಂಗಕಹಳೆ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ  ಈ ಚಿತ್ರಕ್ಕಿದೆ. ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ "ಜೋಗ್ 101" ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.