ಬಹು ನಿರೀಕ್ಷಿತ "ಕಬ್ಜ" ಚಿತ್ರದಿಂದ ಹೊಸ ಅಪ್ಡೇಟ..!

ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ "ಕಬ್ಜ" ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ.

Written by - YASHODHA POOJARI | Edited by - Manjunath N | Last Updated : Jun 9, 2022, 12:11 AM IST
  • ಒಂದು ಹಾಡಿನ ಚಿತ್ರೀಕರಣ ಬಿಟ್ಟು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ.ಏಕಕಾಲದಲ್ಲಿ ಏಳುಭಾಷೆಗಳಲ್ಲೂ ಡಬ್ಬಿಂಗ್ ಸಹ ಸದ್ದಿಲ್ಲದೆ ನಡೆಯುತ್ತಿದೆ.
ಬಹು ನಿರೀಕ್ಷಿತ "ಕಬ್ಜ" ಚಿತ್ರದಿಂದ ಹೊಸ ಅಪ್ಡೇಟ..! title=

ಬೆಂಗಳೂರು : ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ "ಕಬ್ಜ" ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ.

ಒಂದು ಹಾಡಿನ ಚಿತ್ರೀಕರಣ ಬಿಟ್ಟು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ.ಏಕಕಾಲದಲ್ಲಿ ಏಳುಭಾಷೆಗಳಲ್ಲೂ ಡಬ್ಬಿಂಗ್ ಸಹ ಸದ್ದಿಲ್ಲದೆ ನಡೆಯುತ್ತಿದೆ. 

ಇದನ್ನೂ ಓದಿ: ರಾಧಿಕಾ ಪಂಡಿತ್ ಗೆ ಜನ್ಮದಿನದ ಸಂಭ್ರಮ: ಮುಂದಿನ ಸಿನಿಮಾ ಯಾವುದು..?

1940ರ ಕಾಲಘಟ್ಟದ ಕಥೆ ಅದ್ಭುತವಾಗಿದೆ. ಮೋಷನ್ ಪೋಸ್ಟರ್ ಹಾಗೂ ಸ್ಟಿಲ್ಸ್ ಜನಮನಸೂರೆಗೊಂಡಿದೆ.ಮೇಕಿಂಗ್ ತುಣುಕು ನೋಡಿದವರಂತು ಫಿದಾ ಆಗಿದ್ದಾರೆ. ಭಾರತ ದೇಶವೇ ತಿರುಗಿ ನೋಡುವ ಸಿನಿಮಾ ಇದಾಗಲಿದೆ. "ಕಬ್ಜ" ಚಿತ್ರ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲಾಗಲಿ ಎಂಬುದೇ ಕನ್ನಡಿಗರ ಆಶಯ. ಚಿತ್ರದ. ಟೀಸರ್ ನೋಡುವ ಕಾತುರದಲ್ಲಿದ್ದೇವೆ.ಆದಷ್ಟು ಬೇಗ ಬಿಡುಗಡೆ ಮಾಡಿ ಎಂದು ಸಿನಿಪ್ರೇಕ್ಷಕರು ಚಂದ್ರು ಅವರನ್ನು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: Viral Video: ರಣವೀರ್ ಸಿಂಗ್ ಕಾಲು ಹಿಡಿದ ರಾಖಿ ಸಾವಂತ್ ಮಾಡಿದ್ದೇನು..?

ಕಬ್ಜ' (Kabzaa) ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ. 'ಕಬ್ಜ' ಸಿನಿಮಾ ಕಣ್ತುಂಬಿಕೊಳ್ಳಲು ಇಡೀ ಭಾರತವೇ ಕಾಯುತ್ತಿದೆ. ಯಾಕಂದ್ರೆ ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್‌ ನಟರು ಇದ್ದು, ರಿಯಲ್‌ ಸ್ಟಾರ್‌ ಉಪೇಂದ್ರ (Upendra) ಹಾಗೂ ಕಿಚ್ಚ ಸುದೀಪ್‌ ಮಿಂಚಲಿದ್ದಾರೆ. ಈ ಹೊತ್ತಲ್ಲೇ ಚಿತ್ರತಂಡ ಬಿಗ್‌ ಅಪ್‌ಡೇಟ್‌ ನೀಡಿದ್ದು, ಸುದೀಪ್‌ ಅಭಿಮಾನಿಗಳ ದಿಲ್‌ ಖುಷ್‌ ಆಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News