Kabzaa: ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ ‘ಕಬ್ಜ’ ಚಿತ್ರದಿಂದ ಗೀತನಮನ
Kabza Kannada Movie: ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದವೆಂದು ನಿರ್ದೇಶಕ ಆರ್.ಚಂದ್ರು ತಿಳಿಸಿದರು.
ಬೆಂಗಳೂರು: ‘ಕಬ್ಜ’ ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ ಬಹುಕೋಟಿ ವೆಚ್ಚದ ಅದ್ದೂರಿ ಚಿತ್ರ. ಆರ್.ಚಂದ್ರು ನಿರ್ದೇಶನದ, ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ". ಈ ಚಿತ್ರತಂಡದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ.
ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು 5 ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ಇದನ್ನೂ ಓದಿ: Video : ಅಶ್ವಿನಿ ಪುನೀತ್ ರಾಜ್‌ಕುಮಾರ್ ವರ್ಕೌಟ್ ನೋಡಿ, ಅಪ್ಪು ಬಾಸ್ ನೆನಪಿಸಿಕೊಂಡ ಫ್ಯಾನ್ಸ್.!
‘ಕಬ್ಜ’ ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್.ಚಂದ್ರು, ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದವೆಂದು ತಿಳಿಸಿದರು.
"ಕಬ್ಜ" ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಶಿವನನ್ನು ಆರಾಧಿಸುವ ಈ ಹಾಡು ಬಹಳ ಮಧುರವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಪ್ರೋತ್ಸಾಹ ನೀಡಿ ಎಂದು ನಟಿ ಶ್ರೇಯಾ ಶರಣ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡರು.
ಇದನ್ನೂ ಓದಿ: ಹನ್ಸಿಕಾ ಮೋಟ್ವಾನಿಗೆ ರ್ಮೋನ್ ಇಂಜೆಕ್ಷನ್ ನೀಡಲಾಗಿದೆ ಎಂಬ ವದಂತಿ ಬಗ್ಗೆ ಮೌನ ಮುರಿದ ತಾಯಿ..!
ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ "ಕಬ್ಜ" ಚಿತ್ರದ ಟೀಸರ್ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 26ರಂದು ಶಿಡ್ಲಘಟ್ಟದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಕಮರ್ಷಿಯಲ್ ಹಾಡೊಂದು ಲೋಕಾರ್ಪಣೆಯಾಗಲಿದೆ. ಪ್ರಪಂಚದಾದ್ಯಂತ ಅಭಿಮಾನಿಗಳು ಕಾಯುತ್ತಿರುವ "ಕಬ್ಜ" ಚಿತ್ರ ಮಾರ್ಚ್ 17ರಂದು(ಕರ್ನಾಟಕ ರತ್ನ ಪನೀತ್ ರಾಜಕುಮಾರ್ ಜನ್ಮದಿನದಂದು) ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.