`ಕಬ್ಜ` ಚಿತ್ರದ ಹಿಂದಿ ಅವತರಣಿಕೆ ಹಕ್ಕುಗಳು ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ತೆಕ್ಕೆಗೆ
Kabzaa Hindi Teaser: ಶ್ರೀ ಸಿದ್ಧೇಶ್ವರ ಎಂಟರ್ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ, ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್, ಪ್ಯಾನ್ ಇಂಡಿಯಾ `ಕಬ್ಜ` ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಹಲವು ಭಾರತೀಯ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.
Kabzaa Hindi Teaser: ರಿಯಲ್ ಸ್ಟಾರ್ ಉಪೇಂದ್ರ ಮತ್ತು 'ಕಿಚ್ಚ' ಸುದೀಪ್ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ಸಿನಿಮಾದ ಹಿಂದಿ ಟೀಸರ್ ಇಂದು ಬಿಡುಗಡೆಯಾಗಿದೆ. ಇದಲ್ಲದೆ, 'ಕಬ್ಜ' ಸಿನಿಮಾದ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್ನ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಆನಂದ್ ಮೋಷನ್ ಪಿಕ್ಚರ್ಸ್ ತನ್ನದಾಗಿಸಿಕೊಂಡಿದೆ.
ಕಬ್ಜ' ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಹಲವು ಭಾರತೀಯ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ- Abishek Ambareesh : ಡಿ. 11ಕ್ಕೆ ಯಂಗ್ ರೆಬಲ್ ಸ್ಟಾರ್ ಎಂಗೇಜ್‌ಮೆಂಟ್! ಇವರೇ ನೋಡಿ ಅಂಬಿ ಸೊಸೆ!
1960-1984 ರ ಅವಧಿಯಲ್ಲಿ ಭಾರತದ ಭೂಗತ ಜಗತ್ತಿನಲ್ಲಿ ರಾಜನಾದ ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ ಭಾರತೀಯ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾನೆ. ಇಂತಹದ್ದೊಂದು ಕಥಾಹಂದರವನ್ನು ಹೊಂದಿರುವ ಕಬ್ಜ ಚಿತ್ರದ ಬಗ್ಗೆ ಕನ್ನಡದಲ್ಲಿ ಮಾತ್ರವಲ್ಲದೆ, ಇಡೀ ಸಿನಿ ರಂಗದಲ್ಲಿ ಭಾರೀ ಕುತೂಹಲ ಮೂಡಿದೆ.
ಇನ್ನು ಈ ಚಿತ್ರದ ಹಿಂದಿ ವಿತರಣಾ ಹಕ್ಕನ್ನು ಪಡೆದಿರುವ ಆನಂದ್ ಪಂಡಿತ್ ಮಾತನಾಡಿ, ಸಿನಿ ರಸಿಕರನ್ನು ಮನರಂಜಿಸುವುದೇ ನಮ್ಮ ಪ್ರಮುಖ ಉದ್ದೇಶ. 'ಕಬ್ಜ' ಅಂತಹದ್ದೇ ಒಂದು ಫುಲ್ ಎಂಟರ್ಟೈನಿಂಗ್ ಸಿನಿಮಾ ಆಗುವ ಸಂಪೂರ್ಣ ವಿಶ್ವಾಸ ನನಗಿದೆ ಎಂದರು.
ಇದನ್ನೂ ಓದಿ- ನಟ ವಿಜಯ ದೇವರಕೊಂಡಗೆ ಇಡಿ ಕಾಟ..!
'ಕಬ್ಜ' ಸಿನಿಮಾದ ಬಗ್ಗೆ ಮಾತನಾಡಿದ ರಿಯಲ್ ಸ್ಟಾರ್ ಉಪೇಂದ್ರ, ಭೂಗತಲೋಕದ ಹೊಸ ಅಧ್ಯಾಯವಾದ ಕಬ್ಜ ಸಿನಿಮಾದ ಹಿಂದಿ ಅವತರಣಿಕೆಯನ್ನು ಬಾಲಿವುಡ್‌ನ ಹೆಸರಾಂತ ನಿರ್ಮಾಪಕರಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಬಿಡುಗಡೆ ಮಾಡುತ್ತಿರುವುದು ತುಂಬಾ ಸಂತಸದ ವಿಷಯವಾಗಿದೆ. ನಮ್ಮ ಚಿತ್ರಕ್ಕೆ ಇವರ ಸಹಕಾರ ಇದೇ ರೀತಿ ಮುಂದುವರೆಯಲಿ ಎಂದರು.
ತಮ್ಮ ಬಹು ನೀರಿಕ್ಷಿತ ಮುಂದಿನ ಸಿನಿಮಾ 'ಕಬ್ಜ' ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ದಕ್ಷಿಣ ಭಾರತದ ಸಿನಿಮಾಗಳು ಭಾರತೀಯ ಸಿನಿಮಾಗಳಾಗಿ ಗುರುತಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಬಾಲಿವುಡ್‌ನ ಖ್ಯಾತ ವಿತರಕರಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ನಮ್ಮ 'ಕಬ್ಜ' ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಇದು ನಮ್ಮ ಚಿತ್ರತಂಡದ ಕಠಿಣ ಪರಿಶ್ರಮಕ್ಕೆ ಸಿಗುತ್ತಿರುವ ಪ್ರತಿಫಲ ಎಂದು ಬಣ್ಣಿಸಿದರು.
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.