2 ಲಕ್ಷಕ್ಕೆ ಮಾರಾಟವಾಯ್ತು ʼಕಡಲತೀರದ ಭಾರ್ಗವʼ ಚಿತ್ರದ ಫಸ್ಟ್‌ ಟಿಕೆಟ್..!

ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ‌ ತಲುಪಿರುವ ʼಕಡಲ ತೀರದ ಭಾರ್ಗವʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು, ʼನೀರ್ ದೋಸೆʼ ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ ʼಗಜಾನನ ಗ್ಯಾಂಗ್ʼ ಚಿತ್ರದ ನಿರ್ಮಾಪಕರಾದ ನಾಗೇಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

Written by - YASHODHA POOJARI | Edited by - Krishna N K | Last Updated : Feb 15, 2023, 07:15 PM IST
  • ʼಕಡಲ ತೀರದ ಭಾರ್ಗವʼ ಚಿತ್ರದ ಟ್ರೇಲರ್ ಬಿಡುಗಡೆ.
  • ಮಾರ್ಚ್ 3 ನೇ ತಾರೀಖು ರಾಜ್ಯಾದ್ಯಂತ ಈ ಚಿತ್ರ ಬಿಡುಗಡೆ.
  • ಚಿತ್ರದ ಮೊದಲ ಟಿಕೆಟ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು.
2 ಲಕ್ಷಕ್ಕೆ ಮಾರಾಟವಾಯ್ತು ʼಕಡಲತೀರದ ಭಾರ್ಗವʼ ಚಿತ್ರದ ಫಸ್ಟ್‌ ಟಿಕೆಟ್..! title=

Kadala Theerada Bhargava trailer release : ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ‌ ತಲುಪಿರುವ ʼಕಡಲ ತೀರದ ಭಾರ್ಗವʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು, ʼನೀರ್ ದೋಸೆʼ ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ ʼಗಜಾನನ ಗ್ಯಾಂಗ್ʼ ಚಿತ್ರದ ನಿರ್ಮಾಪಕರಾದ ನಾಗೇಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ʼಕಡಲ ತೀರದ ಭಾರ್ಗವʼ ಮಾರ್ಚ್ 3 ನೇ ತಾರೀಖು ರಾಜ್ಯಾದ್ಯಂತ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಟಿಕೆಟ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು. ಅತಿಥಿಯಾಗಿ ಆಗಮಿಸಿದ್ದ ಮೋಹನ್ ರಾಜು ಅವರು 2 ಲಕ್ಷ ರೂಪಾಯಿ ನೀಡಿ ಈ ಚಿತ್ರದ ಮೊದಲ ಟಿಕೆಟ್ ಪಡೆದುಕೊಂಡರು. ಭಾರೀ ಬೆಲೆಗೆ ಟಿಕೆಟ್ ಮಾರಾಟವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿರುವ ನಿರ್ಮಾಪಕರಾದ ಪಟೇಲ್ ವರುಣ್ ರಾಜು ಹಾಗೂ ಭರತ್ ಗೌಡ ಮೊದಲ ಟಿಕೆಟ್ ಮಾರಾಟದಿಂದ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:  Anjali Arora : ಕಚ್ಚಾ ಬದಾಮ್‌ ಹುಡುಗಿಯ ಮತ್ತೊಂದು ಹಾಟ್‌ ವಿಡಿಯೋ ವೈರಲ್‌..! 

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಗೆಲ್ಲುತ್ತಿದೆ. ಅದರಲ್ಲೂ "ಕ" ಹೆಸರಿನಿಂದ ಆರಂಭವಾಗುವ "ಕೆ.ಜಿ.ಎಫ್", "ಕಾಂತಾರ" ಚಿತ್ರಗಳು ಭರ್ಜರಿ ಯಶಸ್ಸು ಕಂಡಿದೆ. ಅದೇ "ಕ" ಅಕ್ಷರದಿಂದ ಆರಂಭವಾಗುವ "ಕಡಲ ತೀರದ ಭಾರ್ಗವ" ಕೂಡ ಪ್ರಚಂಡ ಯಶಸ್ಸು ಕಾಣಲಿ ಎಂದು ಮೋಹನ್ ರಾಜು ಹಾರೈಸಿದರು. ‌ಚಿತ್ರದಲ್ಲಿ ಕಡಲ ತೀರದಲ್ಲಿ ವಾಸಿಸುವ ಭಾರ್ಗವನಾಗಿ ನಾನು ಅಭಿನಯಿಸಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ಅಧಿಕ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ ಮೋಹನ್ ರಾಜು ಅವರಿಗೆ ಹಾಗೂ ಚಿತ್ರಕ್ಕೆ ಸಹಕಾರ ‌ನೀಡಿದ್ದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಟ - ನಿರ್ಮಾಪಕ ಪಟೇಲ್ ವರುಣ್ ರಾಜು.

ನಾನು ಭರತ್ ಎಂಬ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ. ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನತುಂಬಿ ಬಂದಿದೆ ಎಂದು ನಾಯಕ‌ ಭರತ್ ಗೌಡ ತಿಳಿಸಿದರು. ಚಿತ್ರದ ಒಂದು ಸನ್ನಿವೇಶದ ಮೂಲಕ ಮಾತು ಪ್ರಾರಂಭಿಸಿದ ನಿರ್ದೇಶಕ ಪನ್ನಗ ಸೋಮಶೇಖರ್, ಇದು ಹಿರಿಯ ಸಾಹಿತಿ ಶಿವರಾಮ ಕಾರಂತರ ಜೀವನ್ನಾಧಾರಿತ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಮ್ಮ ನಾಯಕನ ಹೆಸರು ಭಾರ್ಗವ ಎಂದರು. ಸಮಾರಂಭದಲ್ಲಿ ಹಾಜರಿದ್ದ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News