Kalki Collection:ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898ಎಡಿ. ಚಿತ್ರ ಗುರುವಾರ ತೆರೆಗೆ ಅಪ್ಪಳಿಸಿತ್ತು. ಬಿಡುಗಡೆಯಾದ ನಂತರ ಎಲ್ಲೆಡೆ ಪಾಸಿಟಿವ್ ಟಾಕ್ ಪಡೆದು ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ಸುನಾಮಿ ಸೃಷ್ಟಿಸುತ್ತಿದೆ. ಎರಡು ದಿನಗಳಲ್ಲಿ ಚಿತ್ರವು ವಿಶ್ವಾದ್ಯಂತ 298.5 ಕೋಟಿ ಕಲೆಕ್ಷನ್ ಮಾಡಿದೆ. ಇದನ್ನು ಚಿತ್ರತಂಡ ಪೋಸ್ಟರ್ ಮೂಲಕ ಪ್ರಕಟಿಸಿದೆ. ಈ ಸಿನಿಮಾ ಮೊದಲ ದಿನ (ಗುರುವಾರ) 191.5 ಕೋಟಿ ಕಲೆಕ್ಷನ್ ಮಾಡಿತ್ತು.. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಪುಷ್ಪಾ ವಿಲನ್ ಫಹಾದ್ ಫಾಜಿಲ್ ವಿರುದ್ಧ ಪ್ರಕರಣ ದಾಖಲು!


ಅದ್ಭುತ ಸಾಹಸ ದೃಶ್ಯಗಳು, ಮಹಾಭಾರತದ ದೃಶ್ಯಗಳನ್ನು ಹೊಂದಿರುವ ಈ ಚಿತ್ರವು ಪ್ರೇಕ್ಷಕರನ್ನು ಆಕರ್ಷಿಸಿದೆ. ನಾಗ್ ಅಶ್ವಿನ್ ಕಥೆಯನ್ನು ಅನ್ನು ಮಹಾಭಾರತಕ್ಕೆ ಜೋಡಿಸಿ ಮನಮುಟ್ಟುವ ಸಿನಿಮಾ ಮಾಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ-ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ಲವ್..‌ ಸದ್ಯ ಖ್ಯಾತ ಸಿರೀಯಲ್‌ ನಟಿಯೊಂದಿಗೆ ಡೇಟಿಂಗ್‌ ಮಾಡುತ್ತಿರುವ ನಟ ಈತ!!


ವೈಜಯಂತಿ ಮೂವೀಸ್ ಬ್ಯಾನರ್‌ನಲ್ಲಿ ಅಶ್ವಿನಿದತ್ ಅವರು ಭಾರೀ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ. ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾನಿ, ಶೋಭನಾ, ವಿಜಯ್ ದೇವರಕೊಂಡ, ದುಲ್ಕರ್ ಸಲ್ಮಾನ್, ಅಣ್ಣಾ ಬೆನ್, ಮಾಳವಿಕಾ ನಾಯರ್, ಬ್ರಹ್ಮಾನಂದಂ ಮತ್ತು ರಾಜೇಂದ್ರ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.