ಶೂಟಿಂಗ್‌ ಮುಗಿಸಿದ ʼಸೇನಾಪತಿʼ..! ಜೂನ್‌ನಲ್ಲಿ ತೆರೆಗೆ ಬರಲಿದೆ ಕಮಲ್ ಹಾಸನ್ ʼಇಂಡಿಯನ್-2ʼ

Kamal Haasan Indian 2 : ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್‌ ಅಪ್‌ಡೇಟ್‌ ಒಂದು ಹೊರ ಬಿದ್ದಿದೆ.

Written by - YASHODHA POOJARI | Edited by - Krishna N K | Last Updated : Apr 14, 2024, 05:36 PM IST
    • ತೆರೆ ಮೇಲೆ ಅಪ್ಪಳಿಸಲು ರೆಡಿಯಾಯ್ತು ಇಂಡಿಯನ್‌ 2
    • ಎಸ್. ಶಂಕರ್ ನಿರ್ದೇಶನದ ಇಂಡಿಯನ್‌ 2 ಸಿನಿಮಾ
    • ವಿಶ್ವ ನಾಯಕ ಕಮಲ್‌ ಹಾಸನ್‌ ನಟನೆಯ ಬಹುನಿರೀಕ್ಷಿತ ಚಿತ್ರ
ಶೂಟಿಂಗ್‌ ಮುಗಿಸಿದ ʼಸೇನಾಪತಿʼ..! ಜೂನ್‌ನಲ್ಲಿ ತೆರೆಗೆ ಬರಲಿದೆ ಕಮಲ್ ಹಾಸನ್ ʼಇಂಡಿಯನ್-2ʼ title=

Indian 2 release date : ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ. 

ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ಕತ್ತಲಲ್ಲಿ ಲವರ್‌ಗೆ ಬದಲು ಆಕೆಯ ತಾಯಿಗೆ ಲಿಪ್‌ ಕಿಸ್‌ ಕೊಟ್ಟ ನಟ..! ಆಮೇಲೆ ಏನಾಯ್ತು..?

ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News