ಶೂಟಿಂಗ್ ಮುಗಿಸಿದ ʼಸೇನಾಪತಿʼ..! ಜೂನ್ನಲ್ಲಿ ತೆರೆಗೆ ಬರಲಿದೆ ಕಮಲ್ ಹಾಸನ್ ʼಇಂಡಿಯನ್-2ʼ
Kamal Haasan Indian 2 : ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್ ಅಪ್ಡೇಟ್ ಒಂದು ಹೊರ ಬಿದ್ದಿದೆ.
Indian 2 release date : ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.
ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ: ಕತ್ತಲಲ್ಲಿ ಲವರ್‌ಗೆ ಬದಲು ಆಕೆಯ ತಾಯಿಗೆ ಲಿಪ್ ಕಿಸ್ ಕೊಟ್ಟ ನಟ..! ಆಮೇಲೆ ಏನಾಯ್ತು..?
ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.