Chandrayaan-3: ಚಂದ್ರಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ನಟ ಕಿಶೋರ್
Chandrayaan-3: ನನ್ನ ದೇಶದ ಕುತಂತ್ರಿ ರಾಜಕಾರಿಣಿಗಳು ನನ್ನ ಮನೆಯ ಹೆಣ್ಣು ಮಕ್ಕಳನ್ನು ಬೀದಿಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಮಾಡುತ್ತಿರುವ ಚಿತ್ರ ಬಂದು ನಿಲ್ಲುತ್ತದೆ… ಎಂದು ಕಿಶೋರ್ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಚಂದ್ರಯಾನ ಯಶಸ್ವಿಯಾಗಿದ್ದು, ಇಡೀ ದೇಶವೇ ಸಂಭ್ರಮದಲ್ಲಿ ಮುಳುಗೇಳುತ್ತಿದೆ. ಇಸ್ರೋ ಸಾಧನೆಗೆ ವಿಶ್ವದ ರಾಷ್ಟ್ರಗಳು ಸಲಾಂ ಹೇಳಿದ್ದು, ‘ವಂದೇ ಮಾತರಂ’ ಘೋಷಣೆ ಎಲ್ಲೆಡೆ ಮೊಳಗುತ್ತಿವೆ. ವಿವಿಧ ಚಿತ್ರರಂಗದ ನಟ-ನಟಿಯರು, ರಾಜಕೀಯ ನಾಯಕರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಸಹ ಚಂದ್ರಯಾನದ ಯಶಸ್ಸಿಗೆ ಖುಷಿ ವ್ಯಕ್ತಪಡಿಸಿದ್ದು, ವಿಜ್ಞಾನಿಗಳ ಮಹತ್ತರ ಸಾಧನೆಯನ್ನು ಮೆಚ್ಚಿಕೊಂಡಿದ್ದಾರೆ.
ಚಂದ್ರಯಾನ-3 ಯಶಸ್ಸಿಗೆ ಖುಷಿ ವ್ಯಕ್ತಪಡಿಸಿರುವ ಬಹುಭಾಷಾ ನಟ ಕಿಶೋರ್ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ನಟ ಕಿಶೋರ್, ದೇಶದ ಭ್ರಷ್ಟ ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಂದ್ರಯಾನ ಯಶಸ್ವಿಯಾಗಿದ್ದು ಹೆಮ್ಮೆಯ ಕ್ಷಣ, ಎದೆ ಬೀಗಿದೆ ಎಂದು ಹೇಳಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕರಟಕ ದಮನಕ ತಂಡದ ಪ್ರತಿಯೊಬ್ಬರಿಗೂ ಯೋಗರಾಜ್ ಭಟ್ ಧನ್ಯವಾದ
ನಟ ಕಿಶೋರ್ ಪೋಸ್ಟ್‌ನಲ್ಲಿ ಏನಿದೆ..?
‘ಚಂದ್ರನ ದಕ್ಷಿಣ ಧ್ರುವದ ಮೇಲೆ ಪ್ರಪಂಚದಲ್ಲೇ ಮೊತ್ತ ಮೊದಲ ಬಾರಿಗೆ ಭಾರತದ ಉಪಗ್ರಹ ಅಡಿಯಿರಿಸಿದೆ… ಹೆಮ್ಮೆಯಿದೆ , ಎದೆ ಬೀಗಿದೆ… ಆದರೆ .. ಸಂಭ್ರಮಿಸಲೇ ಎನ್ನುತ್ತಿರುವಂತೆಯೇ ನನ್ನ ಕಣ್ಣ ಮುಂದೆ. ನನ್ನ ದೇಶದ ಕುತಂತ್ರಿ ರಾಜಕಾರಿಣಿಗಳು ನನ್ನ ಮನೆಯ ಹೆಣ್ಣು ಮಕ್ಕಳನ್ನು ಬೀದಿಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಮಾಡುತ್ತಿರುವ ಚಿತ್ರ ಬಂದು ನಿಲ್ಲುತ್ತದೆ…’ ಎಂದು ಕಿಶೋರ್ ಬೇಸರ ವ್ಯಕ್ತಪಡಿಸಿದ್ದಾರೆ.
ಯಶ್19 ಕಥೆ ಅಲ್ಲ...ರಾಕಿ ಬಾಯ್ ರಾವಣನ ವೇಷದಲ್ಲಿ ಮಿಂಚಿದ್ದು ಇದೇ ಸಿನಿಮಾಗಾಗಿ!
‘ಉಪಗ್ರಹಕ್ಕಿಂತ ಪರದೆಯ ಮೇಲೆ ಹೆಚ್ಚು ರಾರಾಜಿಸಿ ಮೆರೆದ ಪ್ರಧಾನಿಯಂತೆ ನಾನೂ ಕೂಡ ಸ್ವಾರ್ಥಿಯೂ, ಅಸೂಕ್ಷ್ಮಮತಿಯೂ, ಸಂವೇದನಾಹೀನನೂ ಆಗಬಾರದಿತ್ತೆ… ಸಂಬಳವೂ ಇಲ್ಲದೆ ದುಡಿದ ನನ್ನ ದೇಶದ ವಿಜ್ಞಾನಿಗಳ ಬೆವರ ಫಲವನ್ನು ಸಂಭ್ರಮಿಸಲು…???’ ಎಂದು ನಟ ಕಿಶೋರ್ ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.