Akatakata: ನಾಗರಾಜ್ ಸೋಮಯಾಜಿ ‘ಅಕಟಕಟ’ ಚಿತ್ರಕ್ಕೆ ಇವರೇ ನಾಯಕಿ!

Akatakata: 'ಮಹಿರಾ', 'ಗಿಲ್ಕಿ', 'ತಲೆದಂಡ' ಹೀಗೆ ಪ್ರತಿ ಸಿನಿಮಾಗಳಲ್ಲೂ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಚೈತ್ರಾ ಆಚಾರ್ ಈಗ 'ಅಕಟಕಟ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

Written by - Chetana Devarmani | Last Updated : Apr 3, 2022, 02:11 PM IST
  • ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ಹೊಸ ಹೊಸ ನಟಿಯರ ಆಗಮನವಾಗುತ್ತಿದೆ
  • ಅನೇಕ ಸಿನಿಮಾಗಳಲ್ಲಿ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಚೈತ್ರಾ ಆಚಾರ್
  • ‘ಅಕಟಕಟ’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಚೈತ್ರಾ
Akatakata: ನಾಗರಾಜ್ ಸೋಮಯಾಜಿ ‘ಅಕಟಕಟ’ ಚಿತ್ರಕ್ಕೆ ಇವರೇ ನಾಯಕಿ! title=
‘ಅಕಟಕಟ’ ಸಿನಿಮಾದಲ್ಲಿ ಚೈತ್ರಾ ಆಚಾರ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ಹೊಸ ಹೊಸ ನಟಿಯರ ಆಗಮನವಾಗುತ್ತಿದೆ. ಆದರೆ ಗ್ಲಾಮರ್ ಜೊತೆಗೆ ಪ್ರತಿಭೆ, ಅದೃಷ್ಟ ಇದ್ದವರು ಮಾತ್ರ ಇಲ್ಲಿ ಗಟ್ಟಿಯಾಗಿ ನೆಲೆಯೂರಲು ಸಾಧ್ಯ. ಈ ಪೈಕಿ ಪ್ರತಿಭಾನ್ವಿತ ನಾಯಕಿ ಚೈತ್ರಾ ಆಚಾರ್ (Chaitra Achar) ಕೂಡ ಒಬ್ಬರು.

‘ಮಹಿರಾ’, ‘ಗಿಲ್ಕಿ’, ‘ತಲೆದಂಡ’(Taledanda) ಹೀಗೆ ಪ್ರತಿ ಸಿನಿಮಾಗಳಲ್ಲೂ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಚೈತ್ರಾ ಆಚಾರ್ ಈಗ ‘ಅಕಟಕಟ’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಾಗರಾಜ್‌ ಸೋಮಯಾಜಿ (Nagaraj Somayaji) ನಿರ್ದೇಶನ ಮಾಡುತ್ತಿರುವ ‘ಅಕಟಕಟ’(Akatakata) ಸಿನಿಮಾದಲ್ಲಿ ಚೈತ್ರಾ ಆಚಾರ್‌ ಜಾನಕಿ ಎಂಬ ಪಾತ್ರ ಪೋಷಣೆ ಮಾಡಲಿದ್ದಾರೆ.

ಇದನ್ನೂ ಓದಿ: Beast Trailer: ‘ಬೀಸ್ಟ್’ ಟ್ರೇಲರ್ ರಿಲೀಸ್! ‘ಕೆಜಿಎಫ್-2’ಗೆ ಸವಾಲ್ ಹಾಕೋದು ಗ್ಯಾರಂಟಿ?

ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ.. ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ, ಮಧ್ಯಮ ವರ್ಗದ ಹುಡುಗಿಯಾಗಿ ಚೈತ್ರಾ ಬಣ್ಣ ಹಚ್ಚಲಿದ್ದು, ಇಂತಹ ನಾಯಕಿ ನಾಯಕನ ಬದುಕಿಗೆ ಎಂಟ್ರಿ ಕೊಟ್ಟಾಗ ಏನಾಗುತ್ತೇ ಅನ್ನೋದೇ ಇವರ ಪಾತ್ರವಾಗಿದೆ.

ಸಂಚಾರಿ ವಿಜಯ್‌ (Sanchari Vihay) ನಟಿಸಿದ್ದ ‘ಪುಕ್ಸಟ್ಟೆ ಲೈಫು’ (Puksatte Life) ಸಿನಿಮಾ ನಿರ್ಮಾಣ ಮಾಡಿದ್ದ ನಿರ್ದೇಶಕ ನಾಗರಾಜ್‌ ಸೋಮಯಾಜಿ ಅವರು ಮೂಲತಃ ಫೋಟೊಗ್ರಾಫರ್‌. ರಂಗಭೂಮಿಯಲ್ಲಿಯೂ ಸಕ್ರಿಯರಾಗಿರುವ ಅವರು ಕಿರುಚಿತ್ರವೊಂದನ್ನು ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Bharjari Gandu: ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಭರ್ಜರಿ ಗಂಡು’ ಹಿಂದಿ ಡಬ್ಬಿಂಗ್ ರೈಟ್ಸ್

ಈಗ ‘ಅಕಟಕಟ’ ಸಿನಿಮಾಗೆ ಕಥೆಯನ್ನು ನಾಗರಾಜ್‌ ಅವರೇ ಬರೆದಿದ್ದು, ನಿರ್ದೇಶನ ಕೂಡ ಮಾಡ್ತಿದ್ದಾರೆ. ಶೀಘ್ರದಲ್ಲೇ ನಾಯಕ ಮತ್ತು ಉಳಿದ ವಿವರಗಳನ್ನು ಅವರು ರಿವೀಲ್ ಮಾಡಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News