ಬೆಂಗಳೂರು: ಕನ್ನಡ ‘ಬಿಗ್ ಬಾಸ್ ಸೀಸನ್ 8’ರಲ್ಲಿ ಸಖತ್ ಸದ್ದು ಮಾಡಿದ್ದ ಸ್ಯಾಂಡಲ್ ವುಡ್ ನಟಿ ದಿವ್ಯಾ ಸುರೇಶ್(Divya Suresh)​  ಅವರಿಗೆ ಅಪಘಾತವಾಗಿದೆ. ಬೆಂಗಳೂರಿನ ಉತ್ತರಹಳ್ಳಿ ರೋಡ್ ನಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ನಾಯಿಗಳು ಅಡ್ಡಬಂದ ಪರಿಣಾಮ ನಟಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.  


COMMERCIAL BREAK
SCROLL TO CONTINUE READING

ಕೊರೊನಾ ವ್ಯಾಕ್ಸಿನ್(COVID-19 Vaccine)ತೆಗೆದುಕೊಂಡು ಮನೆಗೆ ತೆರಳುವಾಗ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಸಣ್ಣಪುಟ್ಟ ಗಾಯ ಮಾಡಿಕೊಂಡಿರುವ ದಿವ್ಯಾ ಸುರೇಶ್ ಸದ್ಯ ಪ್ರಾಥಮಿಕ ಚಿಕಿತ್ಸೆ ತೆಗೆದುಕೊಂಡು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: Dhanush Divorce : ಪತ್ನಿಗೆ 'ಡೈವೋರ್ಸ್' ನೀಡಿದ ತಮಿಳು ನಟ ಧನುಷ್! 


ಈ ಬಗ್ಗೆ ಸ್ವತಃ ನಟಿ ದಿವ್ಯಾ ಸುರೇಶ್ ಸೋಷಿಯಲ್ ಮೀಡಿಯಾ(Social Media)ದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿದೆ ಅಂತಾ ಹೇಳಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ(Bike Accident) ಸಂಭವಿಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದೇನೆ’ ಅಂತಾ ನಟಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.


Divya Suresh)ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಸುರೇಶ್ ಮತ್ತವರ ಸ್ನೇಹಿತರನ್ನು  ಪೊಲೀಸರು ಮನೆಗೆ ಕಳುಹಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ನಟಿ ಹೈಡ್ರಾಮಾ ನಡೆಸಿದ್ದು ದೊಡ್ಡ ಸುದ್ದಿಯಾಗಿತ್ತು. 


ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.