ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾ ತಪಸ್ವಿ’ ರಾಜೇಶ್(Kalatapasvi Rajesh) ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 2.30ಕ್ಕೆ ರಾಜೇಶ್ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 89 ವರ್ಷದ ಹಿರಿಯ ನಟ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಇಂದು ಸಂಜೆ 6 ಗಂಟೆವರೆಗೂ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ರಾಜೇಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ರಾಜೇಶ್(Kannada senior actor Rajesh) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ಇದನ್ನೂ ಓದಿ: By2Love: ಧನ್ವೀರ್-ಶ್ರೀಲೀಲಾ 'ಬೈ ಟು ಲವ್'ಗೆ ಪ್ರೇಕ್ಷಕ ಪ್ರಭು ಫಿದಾ.!
ಫೆ.9ರಂದು ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಹಿರಿಯಟ ನಟನ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ತಾರೆಯರು, ಅಭಿಮಾನಿಗಳು ಮತ್ತು ಆಪ್ತರು ಕಂಬಿನಿ ಮಿಡಿದಿದ್ದಾರೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.
1932ರ ಏ15ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೇಶ್(Rajesh) ಚಿಕ್ಕ ವಯಸ್ಸಿನಲ್ಲಿಯೇ ಅಭಿನಯದ ಬಗ್ಗೆ ಆಸಕ್ತಿ ಹೊಂದಿದ್ದರು. ಶಾಲಾ-ಕಾಲೇಜು ದಿನಗಳಲ್ಲಿ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ರಾಜೇಶ್ ಅವರ ಮೂಲ ಹೆಸರು ಮುನಿಚೌಡಪ್ಪ. ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಅವರು ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ತಲಾತಪಸ್ವಿ’ ರಾಜೇಶ್ ಎಂದೇ ಅವರು ಖ್ಯಾತಿ ಗಳಿಸಿದರು. 1960ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು.
ಇದನ್ನೂ ಓದಿ: 'ಕೆಜಿಎಫ್-2' ಲೋಕಕ್ಕೆ ಶ್ರುತಿ ಹಾಗೂ ಸುಧಾರಾಣಿ ಎಂಟ್ರಿ ಕೊಟ್ರಾ..?
ಸೊಸೆ ತಂದ ಸೌಭಾಗ್ಯ, ದೇವರ ದುಡ್ಡ, ಕಲಿಯುಗ, ದೇವರ ಗುಡಿ, ವೀರ ಸಂಕಲ್ಪ, ಗಂಗೆ ಗೌರಿ ಸೇರಿದಂತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ಬಣ್ಣ ಹಚ್ಚಿದ್ದಾರೆ. ಇದೇ ಫೆ.25ರಂದು ಬಿಡುಗಡೆ ಆಗಲಿರುವ ‘ಓಲ್ಡ್ ಮಾಂಕ್’(Old Monk) ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ರಾಜೇಶ್ ಅವರ ಪುತ್ರಿ ಆಶಾರಾಣಿ ಕೂಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಖ್ಯಾತ ನಟ ಅರ್ಜುನ್ ಸರ್ಜಾ(Arjun Sarja) 1988ರಲ್ಲಿ ಆಶಾ ರಾಣಿಯನ್ನು ಮದುವೆ ಆದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.