ಬೆಂಗಳೂರು: ಕನ್ನಡದ ಹಿರಿಯ ನಟ, ರಂಗಕರ್ಮಿ ಪ್ರೊ.ಜಿ.ಕೆ.ಗೋವಿಂದ ರಾವ್(GK Govinda Rao) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಪ್ರಾಧ್ಯಾಪಕರಾಗಿ, ಲೇಖಕರಾಗಿ, ರಂಗಭೂಮಿ ಕಲಾವಿದರಾಗಿ ಹಾಗೂ ಚಿತ್ರನಟರಾಗಿ ಗುರುತಿಸಿಕೊಂಡಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30ಕ್ಕೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಪ್ರೊ.ಜಿ.ಕೆ.ಗೋವಿಂದ ರಾವ್(GK Govinda Rao) 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ರಂಗಭೂಮಿ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್ & ಮಹಾಪರ್ವ(Maha Parva and Malgudi Days) ಧಾರಾವಾಹಿ ಸೇರಿ ಅನೇಕ ಧಾರವಾಹಿಗಳಲ್ಲಿ ಹಾಗೂ ಗೃಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ, ನಿಶಬ್ಧ, ಭೂಮಿ ತಾಯಿಯ ಚೊಚ್ಚಲ ಮಗ, …ರೇ ಮುಂತಾದ ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇದನ್ನೂ ಓದಿ: Kiccha Sudeep : ಕೋಟಿಗೊಬ್ಬ-3 ಸಿನಿಮಾ ಪ್ರದರ್ಶನ ಲೇಟ್ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಕಿಚ್ಚ ಸುದೀಪ್
ಹಿರಿಯ ಚಿಂತಕ, ರಂಗಕರ್ಮಿ ಪ್ರೊ ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) October 15, 2021
ಗೋವಿಂದ ರಾವ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ(BS Yediyurappa) ಮತ್ತು ಸಿದ್ದರಾಮಯ್ಯ(Siddaramaiah) ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ‘ಹಿರಿಯ ಚಿಂತಕ, ರಂಗಕರ್ಮಿ ಪ್ರೊ.ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಲೇಖಕ,
ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.ನನ್ನ ಹಿತೈಷಿ,
ಮಾರ್ಗದರ್ಶಕ ಮತ್ತು
ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/d3RDgJqyll
— Siddaramaiah (@siddaramaiah) October 15, 2021
ಇದನ್ನೂ ಓದಿ: ನಿಮ್ಮ ಡೈವೋರ್ಸ್ ಯಾವಾಗ ಆಗುತ್ತೆ ಎಂದು ನಮಗೆ ಹೇಳಿ' ಎಂದ ವ್ಯಕ್ತಿಗೆ ನಟಿ ರಿಚಾ ಚಡ್ಡಾ ಹೇಳಿದ್ದೇನು ಗೊತ್ತೇ?
‘ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್(GK Govinda Rao) ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ