Puneeth Rajkumar: ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ
ಮೆರವಣಿಗೆ ನಡೆಯುವ ವೇಳೆ ಹೆಚ್ಚಿನ ಭದ್ರತೆಗೆ ಕೇಂದ್ರದಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಆಗಮಿಸಿದೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಅಂತಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಅಭಿಮಾನಿಗಳಿಂದ ಪ್ರೀತಿಯಿಂದ ‘ಅಪ್ಪು’ ಎಂದು ಕರೆಸಿಕೊಳ್ಳುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೇವಲ 46 ವರ್ಷದ ಸ್ಟಾರ್ ನಟನ ನಿಧನದ ಸುದ್ದಿ ಇಡೀ ಕರುನಾಡಿನ ಜನತೆಗೆ ಆಘಾತವನ್ನುಂಟು ಮಾಡಿದೆ. ಪುನೀತ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಇಂದು ಸಂಜೆಯೇ ‘ಅಪ್ಪು’ ಅಂತ್ಯಕ್ರಿಯೆ
Kanteerava Studio)ದಲ್ಲಿ ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇಂದು ಸಂಜೆಯೇ ನಟ ಪುನೀತ್ ಅಂತ್ಯಕ್ರಿಯೆ ನಡೆಸಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ಪಾರ್ಥಿವ ಶರೀರದ ಮೆರವಣಿಗೆ ಪ್ರಾರಂಭಿಸಲಾಗುತ್ತದೆ. ಸಂಜೆ 5 ರಿಂದ 5.30ರ ವೇಳೆಗೆ ಕಂಠೀರವ ಸ್ಟುಡಿಯೋ ತಲುಪಲಿದೆ. ಮಧ್ಯಾಹ್ನ 1.30ರ ವೇಳೆಗೆ ಪುನೀತ್ ಪುತ್ರಿ ದೆಹಲಿಗೆ ಬರುತ್ತಾರೆ. ಅಲ್ಲಿಂದ ಸಂಜೆ 4ರಿಂದ 5 ಗಂಟೆ ವೇಳೆಗೆ ಬೆಂಗಳೂರಿಗೆ ಬರುತ್ತಾರೆ. ಅವರು ಆಗಮಿಸುವವರೆಗೂ ಪೂಜೆಗಳನ್ನು ಮಾಡಲಾಗುತ್ತದೆ. ಪುತ್ರಿ ಧೃತಿ ಬಂದ ಬಳಿಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಬಳಿಕ ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿಯೇ ‘ಅಪ್ಪು’ವಿನ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ರಾಕ್ಲೈನ್ ವೆಂಕಟೇಶ್(Rockline Venkatesh) ಹೇಳಿದ್ದಾರೆ.
ಇದನ್ನೂ ಓದಿ: ‘ಬೆಟ್ಟದ ಹೂ’ ಮೂಲಕ ಬಾಲ್ಯದಲ್ಲಿಯೇ ಮೋಡಿ ಮಾಡಿದ್ದ ಪುನೀತ್ ರಾಜ್ ಕುಮಾರ್
ಕುಟುಂಬಸ್ಥರ ತೀರ್ಮಾನವೇ ಅಂತಿಮ: ಕಮಲ್ಪಂತ್
Puneeth Rajkumar) ನಿಧನರಾದ ಬಳಿಕ ಅವರ ಲಕ್ಷಾಂತರ ಅಭಿಮಾನಿಗಳು ಕಂಠೀರವ ಸ್ಟೇಡಿಯಂ(Kanteerava Stadium)ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಲಕ್ಷಾಂತರ ಜನರು ಆಗಮಿಸುತ್ತಿರುವ ಹಿನ್ನೆಲೆ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಜನರು ಇದೇ ರೀತಿ ಸಹಕಾರ ಕೊಡುತ್ತಾರೆಂದು ಭಾವಿಸಿದ್ದೇನೆ. ಕುಟುಂಬದವರ ತೀರ್ಮಾನದಂತೆ ಮುಂದಿನ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರಕ್ಕೆ ಆಗಬೇಕಾದ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರ ಸಂಜೆ ನಡೆಯುವ ಸಾಧ್ಯತೆ ಇದೆ. ಇದು ಕುಟುಂಬದ ನಿರ್ಧಾರದ ಮೇಲೆ ನಿಂತಿದೆ. ಸೂಕ್ತವಾದ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾರ್ಥಿವ ಶರೀರವು ಕಂಠೀರವ ಸ್ಟೇಡಿಯಂನಿಂದ ಸ್ಟುಡಿಯೋವರೆಗೂ ಹೋಗುವ ಸಂದರ್ಭದಲ್ಲಿ ರಸ್ತೆ ಬದಲಾವಣೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಹೇಳಿದ್ದಾರೆ.
ಪುನೀತ್ ನಿಧನಕ್ಕೆ ಚಿತ್ರರಂಗದ ಗಣ್ಯರ ಸಂತಾಪ
ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ನಟನ ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮೆರವಣಿಗೆ ನಡೆಯುವ ವೇಳೆ ಹೆಚ್ಚಿನ ಭದ್ರತೆಗೆ ಕೇಂದ್ರದಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಆಗಮಿಸಿದೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಅಂತಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: RIP Puneeth Rajkumar: ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ