TPL : ಫೆ.28ರಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ..! ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ

Television Premier League 2024 : N1 ಕ್ರಿಕೆಟ್ ಅಕಾಡೆಮಿ ಪ್ರಸ್ತುತ ಪಡಿಸುವ ಟೆಲಿವಿಷನ್ ಪ್ರೀಮಿಯರ್ ಲೀಗ್ ಫೆ. 28ರಿಂದ ಮಾ.3ರವೆರೆಗೆ ನಡೆಯಲಿದೆ. ತಂಡಗಳ ವಿವರ, ನಾಯಕತ್ವ, ಪಂದ್ಯಾವಳಿ ನಡೆಯುವ ಸ್ಥಳದ ವಿವರ ಇಲ್ಲಿದೆ ನೋಡಿ..

Written by - YASHODHA POOJARI | Edited by - Krishna N K | Last Updated : Feb 17, 2024, 08:06 PM IST
  • ವಾಣಿಜ್ಯ ನಗರಿ ಹುಬ್ಬಳ್ಳಿ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿಗೆ ಸಾಕ್ಷಿಯಾಗಲಿದೆ.
  • ಫೆಬ್ರವರಿ 28 ರಿಂದ ಮಾರ್ಚ್ 3 ರವರೆಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯಲಿದೆ.
  • ಕಿರುತೆರೆಯ ಕಲಾವಿದರು ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ.
TPL : ಫೆ.28ರಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ..! ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ title=

TPL Cricket match : ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ N1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಸುತ್ತಾ ಬಂದಿದ್ದಾರೆ. ಈಗಾಗಲೇ ಯಶಸ್ವಿಯಾಗಿ 2 ಸೀಸನ್ ಮುಕ್ತಾಯಗೊಂಡಿದ್ದು, ಇದೀಗ ಟಿಪಿಎಲ್ ಮೂರನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. 

ವಾಣಿಜ್ಯ ನಗರಿ ಹುಬ್ಬಳ್ಳಿ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿಗೆ ಸಾಕ್ಷಿಯಾಗಲಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 3 ರವರೆಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯಲಿದೆ. ಕಿರುತೆರೆಯ ಕಲಾವಿದರು ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ. 

ಇದನ್ನೂ ಓದಿ:'ಹನುಮಾನ್' ಚಿತ್ರತಂಡದಿಂದ ಭರ್ಜರಿ ಆಫರ್..! ಮಿಸ್‌ ಮಾಡ್ಬೇಡಿ.. 

ಈ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಟ ಶ್ರೀಮುರಳಿ, ನೆನಪಿರಲಿ ಪ್ರೇಮ್, ತಿಲಕ್, ಸಚಿವ ಸಂತೋಷ್ ಲಾಡ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಹನುಮಂತರಾಯಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಲಾವಿದರಿಗೆ ಶುಭ ಕೋರಿದರು. 

ಈ ವೇಳೆ ಮಾತನಾಡಿದ ಶ್ರೀಮುರಳಿ, ಯಾವುದೇ ಇವೆಂಟ್ ಚೆನ್ನಾಗಿ ಆಗಬೇಕು ಎಂದರೆ  ಪಾಸಿಟಿವ್ ಮೈಂಡ್ ಸೆಟ್ , ಒಳ್ಳೆ ಜನ ಹಾಗೂ ಒಂದೇ ರೀತಿ ಯೋಚಿಸುವುದು ಮುಖ್ಯ..ಎಲ್ಲದಕ್ಕಿಂತ ಹೆಚ್ಚಾಗಿ ನಮ್ಮ ಅಪ್ಪು ಮಾವ ನೆರಳಲ್ಲಿ ಪ್ರೀತಿಯಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಖುಷಿಯಾಗುತ್ತದೆ. ಅಪ್ಪು ಮಾವನಿಗೆ ಒಂದು ಆಸೆ ಇತ್ತು. ಎಲ್ಲರೂ ಜೊತೆಗೂಡಬೇಕು. ಬರೀ ಇಂಡಿಯಾ ಅಲ್ಲ. ವರ್ಲ್ಡ್ ವೈಡ್ ಹೋಗಬೇಕು ಎಂಬ ಕನಸು ಕಟ್ಟಿಕೊಂಡಿದ್ದರು. ಆದರೆ ಎಲ್ಲರ ಟೈಮ್ ಸೆಟ್ ಆಗುವುದಿಲ್ಲ. ಎಲ್ಲಾ ಟೆಲಿವಿಷನ್ ಕಲಾವಿದರಿಗೂ ನನ್ನದೊಂದು ಗೌರವ. ಎಲ್ಲರೂ ಚೆನ್ನಾಗಿ ಆಡಿ. ಯಾರಾದ್ರೂ ಗೆಲ್ಲಲಿ..ಭಾಗವಹಿಸುವುದು ಮುಖ್ಯ. ನನಗೆ ಕ್ರಿಕೆಟ್ ಎಂದರೆ ಇಷ್ಟ. ಆದರೆ ನನಗೆ ಆಡಲು ಬರುವುದಿಲ್ಲ ಎಂದರು. 

ಇದನ್ನೂ ಓದಿ:ಕರಾವಳಿ ಬೆಡಗಿ ʼಕೃತಿ ಶೆಟ್ಟಿʼ ನಿಜವಾದ ಹೆಸರೇನು ಗೊತ್ತಾ?

ಸಚಿವ ಸಂತೋಷ್ ಲಾಡ್  ಮಾತನಾಡಿ, ವಿಶೇಷವಾದ ಆಹ್ವಾನ ನೀಡಿದ ಸುನಿಲ್ ಅವರಿಗೆ ಧನ್ಯವಾದ. ಟಿಲಿವಿಷನ್ ಪ್ರೀಮಿಯರ್ ಲೀಗ್ ಸತತ ಮೂರನೇ ಬಾರಿಗೆ ನಡೆಯುತ್ತಿದೆ. ನನ್ನ ಅದೃಷ್ಟ ನಾನು ಈ ಬಾರಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಉಸ್ತುವಾರಿ  ಸಚಿವನಾಗಿದ್ದೇನೆ. ಅಲ್ಲಿ ನಡೆಯುತ್ತಿದೆ. ನಿಮ್ಮೆಲ್ಲರಿಗೆ ಉತ್ತರಕರ್ನಾಟಕ ನಮ್ಮ ಟ್ವಿನ್ಸ್ ಸಿಟಿಗೆ ಸ್ವಾಗತಿಸ್ತೇನೆ,. ಕ್ರಿಕೆಟ್ ನಿಂದ ಇತ್ತೀಚೆಗೆ ಯುವ ಜನತೆಗೆ ಸಾಕಷ್ಟು ಅವಕಾಶ ಸಿಗುತ್ತಿದೆ. ನೀವು ಪ್ರಮೋಟ್ ಮಾಡ್ತಿರುವುದರಿಂದ ಈ ಕ್ರಿಕೆಟ್ ಮತ್ತಷ್ಟು ಬೆಳೆಯಲಿ. ಕ್ರಿಕೆಟ್ ನಲ್ಲಿ ಭಾಗವಹಿಸುತ್ತಿರುವ ನಿಮ್ಮೆಲ್ಲರಿಗೆ ಒಳ್ಳೆದಾಗಲಿ ಎಂದು ತಿಳಿಸಿದರು.

ನೆನಪಿರಲಿ ಪ್ರೇಮ್ ಮಾತನಾಡಿ, ಇಲ್ಲಿರುವ ಎಲ್ಲರೂ ನನ್ನ ಆತ್ಮೀಯ ಸ್ನೇಹಿತರು. ಎಲ್ಲರೂ ಸೇರಿ ಕ್ರಿಕೆಟ್ ಆಡುತ್ತಿರುವುದು  ಬಹಳ ಖುಷಿ ವಿಚಾರ. ಕ್ರಿಕೆಟ್ ಅಂದರೆ ಬರೀ ಆಟವಲ್ಲ. ಎಲ್ಲರೂ ಒಂದು ಕಡೆ ಸೇರಿಸುವ ಆಟವಾಗಿದೆ. ಕೆಲಸ ಮಾಡಿ ಮನೆಗೆ ಹೋಗುತ್ತೇವೆ, ನಮ್ಮದೇ ಲೈಫ್ ನಲ್ಲಿ ಕಳೆದು ಹೋಗುತ್ತೇವೆ. ಎಲ್ಲಾ ಸ್ನೇಹಿತರು ಒಂದು ಕಡೆ ಸೇರುವುದು ಕಷ್ಟ. ಆದ್ರೆ ಇಲ್ಲಿ ಕ್ರಿಕೆಟ್ ಮಾಡುತ್ತಿದೆ. ಬಹಳ ಸಂತೋಷ ವಿಚಾರ. ನನಗೂ ಟೆಲಿವಿಷನ್ ಗೂ ಅವಿನಾಭಾವ ಸಂಬಂಧವಿದೆ. ನಾನು ಇಲ್ಲಿ ಗೆಸ್ಟ್ ಆಗಿ ಬಂದಿಲ್ಲ. ಸ್ನೇಹಿತನಾಗಿ ಬಂದಿದ್ದೇನೆ. ಎಲ್ಲಾ ತಂಡಕ್ಕೂ ಒಳ್ಳೆದಾಗಲಿ ಎಂದರು. 

ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿವೆ. 12 ಓವರ್ಗಳ ಪಂದ್ಯದಲ್ಲಿ 10 ತಂಡಗಳು ಭಾಗವಹಿಸಲಿವೆ. ಐಪಿಎಲ್ ನಂತೆ ಬಿಡ್ಡಿಂಗ್ ಮಾಡಿ ಆಟಗಾರರ ಆಯ್ಕೆ ಮಾಡಲಾಗಿದೆ. ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3 ನಲ್ಲಿ ಆಡುತ್ತಿರುವುದು ವಿಶೇಷ.. 

ಇದನ್ನೂ ಓದಿ: ತೆರೆಗೆ ಬರಲು ಪ್ರೇತ ರೆಡಿ... ಯಾವಾಗ ಬಿಡುಗಡೆಯಾಗ್ತಿದೆ ಕಲಾಕಾರ್ ಚಿತ್ರ?

ತಂಡಗಳ ವಿವರ ಇಲ್ಲಿದೆ..

ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೆವಿಯರ್, AVR ಟಸ್ಕರ್ಸ್, ರಾಸು ವಾರಿಯರ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಲಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ಗಳಿರಲಿದ್ದಾರೆ. ಎವಿಆರ್ ಗ್ರೂಪ್ಸ್ನ ಹೆಚ್ ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ. 

ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕನಾದರೆ ರಾಜೇಶ್ ಎಲ್ ಓನರ್, ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, 

ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ಟಸ್ಕರ್ಸ್ಗೆ ಚೇತನ್ ಸೂರ್ಯ ನಾಯಕ - ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೆವಿಯರ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News