‘ಕಲಾ ತಪಸ್ವಿ’ ರಾಜೇಶ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ

ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ. ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Written by - Zee Kannada News Desk | Last Updated : Feb 19, 2022, 11:35 AM IST
  • ಹಿರಿಯ ನಟ ರಾಜೇಶ್ ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ ಎಂದ ಸಿಎಂ ಬೊಮ್ಮಾಯಿ
  • ಕನ್ನಡ ಚಿತ್ರರಂಗ ಮತ್ತೊಬ್ಬ ಉತ್ತಮ ಕಲಾವಿದನನ್ನು ಕಳೆದುಕೊಂಡಂತಾಗಿದೆ ಎಂದ ಎಚ್.ಡಿ.ದೇವೇಗೌಡ
  • ರಾಜೇಶ್ ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು ಎಂದ ಸಿದ್ದರಾಮಯ್ಯ
‘ಕಲಾ ತಪಸ್ವಿ’ ರಾಜೇಶ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ title=
ಹಿರಿಯ ನಟ ರಾಜೇಶ್ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾ ತಪಸ್ವಿ’ ರಾಜೇಶ್ ನಿಧನಕ್ಕೆ ಮುಖ‍್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಅಂತಾ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿ, ‘ಖ್ಯಾತ ಪೋಷಕ ನಟ ‘ಕಲಾ ತಪಸ್ವಿ’ ರಾಜೇಶ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕನ್ನಡ ಚಿತ್ರರಂಗ ಮತ್ತೊಬ್ಬ ಉತ್ತಮ ಕಲಾವಿದನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಕುಟುಂಬಕ್ಕೆ ನನ್ನ  ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ’ ಅಂತಾ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: By2Love: ಧನ್ವೀರ್‌-ಶ್ರೀಲೀಲಾ 'ಬೈ ಟು ಲವ್'ಗೆ ಪ್ರೇಕ್ಷಕ ಪ್ರಭು ಫಿದಾ.!

ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ. ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು. ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಅಂತಾ ಹೇಳಿದ್ದಾರೆ.

‘ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ರಾಜೇಶ್‌ ಅವರು ವಿಧಿವಶರಾದ ಸುದ್ದಿ ಅತೀವ ದುಃಖವನ್ನುಂಟುಮಾಡಿದೆ. ರಂಗಭೂಮಿ ಹಿನ್ನೆಲೆಯಿಂದ ಬೆಳ್ಳಿತೆರೆ ಪ್ರವೇಶಿಸಿದ್ದ ರಾಜೇಶ್ ಅವರ ನಿಧನದಿಂದ ಚಿತ್ರರಂಗ ಹಿರಿಯ ನಟನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರು ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ’ ಅಂತಾ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: 'ಕೆಜಿಎಫ್-2' ಲೋಕಕ್ಕೆ ಶ್ರುತಿ ಹಾಗೂ ಸುಧಾರಾಣಿ ಎಂಟ್ರಿ ಕೊಟ್ರಾ..?

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ‘ಹಿರಿಯ ನಟ, ‘ಕಲಾ ತಪಸ್ವಿ’ ಎಂದೇ ಖ್ಯಾತರಾಗಿದ್ದ ರಾಜೇಶ್‌ ಅವರ ನಿಧನ ನನಗೆ ದುಃಖವುಂಟು ಮಾಡಿದೆ. ರಂಗಭೂಮಿ, ಚಿತ್ರರಂಗದಲ್ಲಿ ದೊಡ್ಡ ಹೆಸರಾಗಿದ್ದ ರಾಜೇಶ್‌ ಅವರು ಸಹಜ ಅಭಿನಯದ ಮೂಲಕ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ್ದರು. ಕನ್ನಡಿಗರ ಮನೆ-ಮನಗಳನ್ನು ತುಂಬಿದ್ದರು. ‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್‌ ಅವರು ಪ್ರತೀ ಪಾತ್ರದಲ್ಲೂ ಜೀವಿಸಿದ್ದರು, ಕನ್ನಡಿಗರ ಮನಸೂರೆಗೊಂಡಿದ್ದರು’ ಅಂತಾ ನೆನಪಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ‘ಹಿರಿಯ ಕನ್ನಡ ನಟ ಕಲಾತಪಸ್ವಿ ರಾಜೇಶ್ ಅವರ ನಿಧನವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ತಮ್ಮ ಅಮೋಘ ನಟನೆಯ ಮೂಲಕ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ರಾಜೇಶ್ ಅವರ ಆತ್ಮಕ್ಕೆ‌ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಾಂತ್ವನ ಕೋರುತ್ತೇನೆ’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News