ನವದೆಹಲಿ : 65 ನೇ ಗ್ರ್ಯಾಮಿ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿಯ ಗ್ರ್ಯಾಮಿ ಪ್ರಶಸ್ತಿಯನ್ನು ಕನ್ನಡಿಗ ಸಂಗೀತ ನಿರ್ದೇಶಕ ರಿಕಿ ಕೇಜ್ ತನ್ನ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮೂರನೇ ಗ್ರ್ಯಾಮಿ ಪ್ರಶಸ್ತಿ ಗೆದ್ದು ಕೊಂಡ  ಗೌರವಕ್ಕೆ ಪಾತ್ರರಾಗಿದ್ದಾರೆ. ಇದರೊಂದಿಗೆ ಮೂರು ಗ್ರ್ಯಾಮಿ ಪ್ರಶಸ್ತಿ ಪಡೆದ ಏಕೈಕ ಭಾರತೀಯ ಸಂಗೀತ ನಿರ್ದೇಶಕ ಎನ್ನುವ ಹೆಮ್ಮೆಗೂ ರಿಕಿ ಕೇಜ್ ಪಾತ್ರರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಡಿವೈನ್ ಟೈಡ್ಸ್ ಎಂಬ ಆಲ್ಬಂ ಬೆಸ್ಟ್‌ ಇಮ್ಮರ್ಸೀವ್‌ ಆಡಿಯೋ ಆಲ್ಬಂ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದು, ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗ್ರ್ಯಾಮಿ ಪ್ರಶಸ್ತಿಗೆ ಭಾಜನವಾಗಿದೆ. ಬ್ರಿಟಿಷ್ ರಾಕ್ ಬ್ಯಾಂಡ್ ದಿ ಪೊಲೀಸ್‌ನ ಡ್ರಮ್ಮರ್‌ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರೊಂದಿಗೆ ಈ ಪ್ರಶಸ್ತಿಯನ್ನು ರಿಕಿ ಕೇಜ್ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ : "ನೀವೆಲ್ಲ ನೋಡಿದ್ದು ಕಾಂತಾರ 2, ಮುಂದೆ ಬರೋದು ಕಾಂತಾರ 1": ತಲೆಗೆ ಹುಳ ಬಿಟ್ಟ ರಿಷಬ್ ಶೆಟ್ಟಿ
ಮೂರನೇ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದ ಸಂಭ್ರಮವನ್ನು ರಿಕಿ ಕೇಜ್  ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ರಿಕ್ಕಿ ಕೇಜ್ ಸಾಂಪ್ರಾದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದರು. 


 


Weekend With Ramesh : ಜೀ ʼವೀಕೆಂಡ್‌ ವಿತ್‌ ರಮೇಶ್‌ʼ ಸೀಸನ್‌ 5 ಅತೀ ಶೀಘ್ರದಲ್ಲಿ ನಿಮ್ಮ ಮುಂದೆ..! ಫಸ್ಟ್‌ ಗೆಸ್ಟ್‌ ಯಾರು..?


- ರಿಕಿ ಕೇಜ್ ಕಳೆದ ವರ್ಷ ಇದೇ ಆಲ್ಬಮ್‌ಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.
- 2015 ರಲ್ಲಿ 'ವಿಂಡ್ಸ್ ಆಫ್ ಸಂಸಾರ' ಗಾಗಿ ಅತ್ಯುತ್ತಮ ಹೊಸ ಯುಗದ ಆಲ್ಬಂ ವಿಭಾಗದಲ್ಲಿ ತಮ್ಮ ಮೊದಲ ಗ್ರ್ಯಾಮಿ ಪ್ರಶಸ್ತಿ ತಮದಾಗಿಸಿಕೊಂಡಿದ್ದರು. 
 - ಮೂಲಗಳ ಪ್ರಕಾರ, ರಿಕಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದ ಭಾರತದ ಅತ್ಯಂತ ಕಿರಿಯ ವ್ಯಕ್ತಿ ಮತ್ತು  4 ನೇ ಭಾರತೀಯ ಎನ್ನಲಾಗಿದೆ. 
 - ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾದ 16 ಸ್ಟುಡಿಯೋ ಆಲ್ಬಮ್‌ಗಳು, 3500 ಕ್ಕೂ ಹೆಚ್ಚ ಕಮರ್ಷಿಯಲ್ ಮತ್ತು 4 ಚಲನಚಿತ್ರ ಸೇರಿದಂತೆ ಗಳನ್ನು  ಸರ್ ಡೇವಿಡ್ ಅಟೆನ್‌ಬರೋ ನಿರೂಪಣೆಯ  ಡಾಕ್ಯುಮೆಂಟರಿ ವೈಲ್ಡ್ ಕರ್ನಾಟಕ'  ಇವರ ಸಾಧನೆಯ ಪಟ್ಟಿಯಲ್ಲಿ ಸೇರಿವೆ. 
- ಉತ್ತರ ಕೆರೊಲಿನಾದಲ್ಲಿ 1981 ರಲ್ಲಿ ಜನಿಸಿದ, ಶ್ರೀ ಕೇಜ್ 8 ನೇ ವಯಸ್ಸಿನಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನಲ್ಲಿ ದಂತವೈದ್ಯಶಾಸ್ತ್ರದಲ್ಲಿ ಪದವಿ ಪೂರೈಸಿರುವ ಇವರು ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ಓದಿದ್ದಾರೆ. 

 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...