Saptami Gowda: ಪ್ರೈಡ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಿದ ಕಾಂತಾರ ಚೆಲುವೆ ಸಪ್ತಮಿ ಗೌಡ
Saptami Gowda in Pride India award function: ಕಾಂತಾರ ಚೆಲುವೆ ಸಪ್ತಮಿ ಗೌಡ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡಿದರು.
ಬೆಂಗಳೂರು: ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡುವ ಸಲುವಾಗಿ ಪ್ರೈಡ್ ಇಂಡಿಯಾ ಅವಾರ್ಡ್ (India Pride Award) ಕಾರ್ಯಕ್ರಮವನ್ನು ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿಂದು ಪ್ರಶಸ್ತಿ ವಿತರಣೆ ಕಾರ್ಯಕ್ರಮ ನೆರವೇರಿದೆ. ಕಾಂತಾರ ಚೆಲುವೆ ಸಪ್ತಮಿ ಗೌಡ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡಿದರು. ಜೊತೆಗೆ ಉದ್ಯಮ ರಂಗದ ದಿಗ್ಗಜರು, ಸಾಧಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಹಲವು ಸವಾಲುಗಳನ್ನು ಎದುರಿಸಿ ಉದ್ಯಮ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನ ಮಾಡುವ ಕಾರ್ಯಕ್ರಮ ಅದಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಟಿ ನಟಿ ಸಪ್ತಮಿ ಗೌಡ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಇದನ್ನೂ ಓದಿ: sonali bendre: ನಿರ್ಮಾಪಕರೇ ನಟ - ನಟಿಯರ ನಡುವೆ ಸಂಬಂಧ ಕಟ್ಟೋದು.. ಸೋನಾಲಿ ಬೇಂದ್ರೆ ಸೆನ್ಸೇಷನಲ್ ಕಾಮೆಂಟ್ !
ಬೆಂಗಳೂರಿನಲ್ಲಿ ಇಂಡಿಯಾ ಪ್ರೈಡ್ ಅವಾರ್ಡ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇದೊಂದು ಅದ್ಭುತ ಕಾರ್ಯಕ್ರಮ. ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಈ ಕಾರ್ಯಕ್ರಮ ಅರ್ಥ ಪೂರ್ಣವಾಗಿದೆ. ನಿಮ್ಮ ಪ್ರತಿ ಕೆಲಸದಲ್ಲಿ ಕುಟುಂಬದ ಬೆಂಬಲವಿದ್ದರೆ ಮಾತ್ರ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.
ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಪರಿಕಲ್ಪನೆ ಈ ಪ್ರೈಡ್ ಇಂಡಿಯಾ ಅವಾರ್ಡ್. ಉದ್ಯಮ ವಲಯದಲ್ಲಿ ತಮ್ಮ ಸಾಹಸಗಳ ಮೂಲಕ ಗೆದ್ದವರು ಹಲವು ವಿಭಾಗದಲ್ಲಿದ್ದಾರೆ. ಅಂಥಹವರನ್ನು ಗುರುತಿಸಿ, ಪ್ರೋತ್ಸಾಹಿಸಿ, ಭಾರತೀಯ ಉದ್ಯಮ ರಂಗ ಹೊಸಾ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆ ನೀಡುವುದು ಈ ಪ್ರಶಸ್ತಿಯ ಮೂಲ ಉದ್ದೇಶ.
ಇದೀಗ ಬೆಂಗಳೂರಿನಲ್ಲಿ ನಡೆದಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಮುನ್ನೂರಕ್ಕೂ ಹೆಚ್ಚು ಮಂದಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಭಾರತದ ಆರ್ಥಿಕ ಪಥವನ್ನು ಪ್ರಜ್ವಲಿಸುವಂತೆ ಮಾಡುವಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿರುವ ಅನೇಕರನ್ನು ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಪುಷ್ಪ 2 ವಿಚಾರದಲ್ಲಿ ಮತ್ತೆ ಅದೇ ತಪ್ಪು ಮಾಡಲು ಹೊರಟಿದೆ ಚಿತ್ರತಂಡ.. ಇದು ವರ್ಕ್ ಔಟ್ ಆಗುತ್ತಾ?
ಆ ಆಯ್ಕೆ ಪ್ರಕ್ರಿಯೆ ಕೂಡಾ ಅತ್ಯಂತ ಅಚ್ಚುಕಟ್ಟಾಗಿ ನಡೆಯುತ್ತದೆ. ಯಾವುದೇ ಉದ್ಯಮದಲ್ಲಿನ ಹೊಸತನ, ಪ್ರಯೋಗಶೀಲತೆ, ಸಾಹಸ ಪ್ರವೃತ್ತಿಯನ್ನು ಪರಿಗಣಿಸುತ್ತಲೇ, ಗಹನವಾದ ಚರ್ಚೆ, ಹಲವಾರು ಮಾನದಂಡಗಳ ಆಧಾರದಲ್ಲಿ ಈ ಸಮಿತಿ ಪ್ರೈಡ್ ಇಂಡಿಯಾ ಅವಾರ್ಡ್ ಗೆ ಅರ್ಹರನ್ನು ಆಯ್ಕೆ ಮಾಡಿದೆ.
ಇದೇ ಸಂದರ್ಭದಲ್ಲಿ ಈ ಅವಾರ್ಡ್ ಈವೆಂಟಿನ ಸ್ಥಾಪಕರಾದ ವಿನಯ್ ಕುಮಾರ್ ನಾರಾಯಣಸ್ವಾಮಿ ಮನದುಂಬಿ ಮಾತಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.