Karataka Damanaka: ‘ಕರಟಕ ದಮನಕ’ ಚಿತ್ರದ ಮೊದಲ ಝಲಕ್ ನೋಡಿ ಥ್ರಿಲ್ ಆದ್ರು ಫ್ಯಾನ್ಸ್!
Karataka Damanaka Kannada film: ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನವದೆಹಲಿ: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಮತ್ತು ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೆ ಅಭಿನಯಿಸಿರುವ 'ಕರಟಕ ದಮನಕ' ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದ್ದು, ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಲ್‍ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ನಿರ್ದೇಶವಿದೆ.
‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು "ಕರಟಕ" ಇನ್ನೊಂದರ ಹೆಸರು "ದಮನಕ". ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ...!! ಎಚ್ಚರಿಕೆ'! ಎಂಬ ಈ ಬರಹದ ಮೂಲಕ ನಿರ್ದೇಶಕ ಯೋಗರಾಜ್ ಭಟ್ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಇದನ್ನೂ ಓದಿ: Sadha : ಮದುವೆಯಾದರೆ ನನ್ನ ʼಆ ಆಸೆಗಳನ್ನುʼ ಮುಂದುವರೆಸಲು ಸಾಧ್ಯವಿಲ್ಲ..! ಅದಕ್ಕೆ ಬೇಡ
ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.
ಇದನ್ನೂ ಓದಿ: ಮಂತ್ರಾಲಯ ಸನ್ನಿಧಿ-ಬಳ್ಳಾರಿ ಜಾತ್ರೆಯಲ್ಲಿ "ಉಸಿರೇ ಉಸಿರೇ" ಟೀಸರ್ ರಿಲೀಸ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.