ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ "ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾ ಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಟ್ರೆಂಡಿಂಗ್ ನಲ್ಲಿದೆ.
ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡಿಗೆ ಕನ್ನಡ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರಿಗೂ ಸಹ ಈ ಹಾಡು ಅಚ್ಚುಮೆಚ್ಚಂತೆ. ಬಾಲ ಪ್ರತಿಭೆಗಳ ಗಾಯನದಲ್ಲಿ ಮೂಡಿಬಂದಿರುವ ಈ ಹಾಡನ್ನು ಮೆಚ್ಚಿಕೊಂಡ ನಾರಾಯಣ ಗೌಡ ಅವರು ಚಿತ್ರತಂಡದವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದ್ದಾರೆ.
ಬಾಲ ಪ್ರತಿಭೆಗಳು ಹಾಡಿರುವ "ಠಾಣೆ" ಚಿತ್ರದ ಅರ್ಥಗರ್ಭಿತ ಈ ಹಾಡನ್ನು ನಾನು ದಿನಕ್ಕೆ ನಾಲ್ಕೈದು ಬಾರಿ ಕೇಳುತ್ತಲೇ ಇರುತ್ತೇನೆ. ಅಷ್ಟು ಇಷ್ಟವಾಗಿದೆ ನನಗೆ ಈ ಹಾಡು. ಮಕ್ಕಳು ತುಂಬಾ ಚೆನ್ನಾಗಿ ಹಾಡಿದ್ದಾರೆ. ರೆಮೊ ಅವರ ಸಾಹಿತ್ಯ ಹಾಗೂ ಮಾನಸ ಹೊಳ್ಳ ಅವರ ಸಂಗೀತ ನಿರ್ದೇಶನ ಕೂಡ ಬಹಳ ಸುಂದರವಾಗಿದೆ. ಮಾನಸ ಹೊಳ್ಳ ಅವರು ನಮ್ಮ ಹಿರಿಯ ನಟ ಶಂಖನಾದ ಅರವಿಂದ್ ಅವರ ಪುತ್ರಿ. ಅವರ ತಂದೆ ಅದ್ಭುತ ಕಲಾವಿದರು. ಮಗಳು ಸಹ ಉತ್ತಮ ಸಂಗೀತ ನಿರ್ದೇಶಕಿ. ಇಂತಹ ಮನಮುಟ್ಟುವ ಹಾಡನ್ನು ನೀಡಿದ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು. ನಿಮ್ಮ ತಂಡದ ಜೊತೆಗೆ ಸದಾ ನಾನು ಇರುತ್ತೇನೆ. ಹಾಡಿನಷ್ಟೇ ಚಿತ್ರ ಕೂಡ ಯಶಸ್ವಿಯಾಗಲಿ ಎಂದು ನಾರಾಯಣ ಗೌಡ ಅವರು ಹಾರೈಸಿದರು.
ಇದನ್ನೂ ಓದಿ: ನವರಸನ್ "ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್" ಗೆ ಚಂದನ್ ಶೆಟ್ಟಿ ಥೀಮ್ ಸಾಂಗ್..!
ನಿರ್ದೇಶಕ ಎಸ್ .ಭಗತ್ ರಾಜ್, ನಾಯಕ ಪ್ರವೀಣ್, ಸಂಗೀತ ನಿರ್ದೇಶಕಿ ಮಾನಸ ಹೊಳ್ಳ ಮುಂತಾದ "ಠಾಣೆ" ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. "ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕ ರಾಜೇಶ್ ಕೃಷ್ಣ ಅವರು ಹಾಡಿರುವ ಹಾಡೊಂದು ಸದ್ಯದಲ್ಲೇ ಲೇಖಾ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









