Puneet Rajkumar : ಪುನೀತ್ ರಾಜಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ!

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಪುನೀತ್ ನಮನ' ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. 

Written by - Channabasava A Kashinakunti | Last Updated : Nov 16, 2021, 05:58 PM IST
  • ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ 19 ದಿನ
  • ದಿವಗಂತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ ಪ್ರಶಸ್ತಿ'
  • ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದ ಸಿಎಂ ಬಸವರಾಜ್ ಬೊಮ್ಮಾಯಿ
Puneet Rajkumar : ಪುನೀತ್ ರಾಜಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ! title=

ಬೆಂಗಳೂರು : ದಿವಗಂತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ ಪ್ರಶಸ್ತಿ' ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ 19 ದಿನವಾಗಿದೆ. ಹೀಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಪುನೀತ್ ನಮನ' ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. 

ಈ ಕುರಿತು ಟ್ವಿಟ್ಟರ್ ಅಲ್ಲಿ ಮಾಹಿತಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, "ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ" ಎಂದು ತಳಿಸಿದ್ದಾರೆ.

ಈ ಬಗ್ಗೆ ರಾಜಕೀಯ ವ್ಯಕ್ತಿಗಳು, ಸಿನಿ ಗಣ್ಯರು ಶುಭ ಕೋರುತ್ತಿದ್ದಾರೆ. ಸಚಿವ ಸಿ ಅಶ್ವಥ್ ನಾರಾಯಣ ಅವರು ಟ್ವಿಟ್ಟರ್ ನಲ್ಲಿ  "ಕರ್ನಾಟಕ ರತ್ನ" ಪುನೀತ್ ರಾಜ್ ಕುಮಾರ್, ನಾಡಿನ ಖ್ಯಾತ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಕರುನಾಡಿನ ನೆಚ್ಚಿನ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ನಮನಗಳು. ಎಂದು ಬರೆದುಕೊಡಿದ್ದಾರೆ.

ಸಚಿವ ಬಿ ಶ್ರೀರಾಮುಲು ಅವರು ಕೂಡ ಶುಭ ಹಾರೈಸಿದ್ದಾರೆ, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ "ಕರ್ನಾಟಕ ರತ್ನ ಪ್ರಶಸ್ತಿ" ನೀಡಿ ಗೌರವಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News