Cinema Theater: ಸಿನಿಮಾ ಥಿಯೇಟರ್ ಗೆ ಸರ್ಕಾರದಿಂದ ಹೊಸ ಗೈಡ್ ಲೈನ್ಸ್..!
ಗ್ರಾಹಕರು ಟಿಕೆಟ್ ಪಡೆಯುವಾಗ ಹಾಗೂ ಸಿನಿಮಾ ನೋಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಟಿಕೆಟ್ ಬುಕಿಂಗ್ ಸಮಯದಲ್ಲಿ ಹೆಸರು ಮತ್ತು ಮೊಬೈಲ್ ನಂಬರ್ ನೀಡುವುದು ಕಡ್ಡಾಯ
ಬೆಂಗಳೂರು: ತನ್ನ ವಿರುದ್ಧ ಚಂದನವನ ಸಿಡಿದೇಳುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ, ಕೊನೆಗೂ ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನೀಡಿದ್ದು, ಹೌಸ್ಫುಲ್ ಪ್ರದರ್ಶನಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದು ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಗೂ ಅನ್ವಯ.
ಗ್ರಾಹಕರು ಟಿಕೆಟ್ ಪಡೆಯುವಾಗ ಹಾಗೂ ಸಿನಿಮಾ(Cinema) ನೋಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಟಿಕೆಟ್ ಬುಕಿಂಗ್ ಸಮಯದಲ್ಲಿ ಹೆಸರು ಮತ್ತು ಮೊಬೈಲ್ ನಂಬರ್ ನೀಡುವುದು ಕಡ್ಡಾಯ. ಏರ್ ಕೂಲರ್ ವ್ಯವಸ್ಥೆಯಲ್ಲಿ ಸಿನಿಮಾ ಪ್ರದರ್ಶನ ಮಾಡುವಾಗ CPWD ಮಾರ್ಗಸೂಚಿ ಪಾಲಿಸಬೇಕು. ವೆಂಟಿಲೇಷನ್ ವ್ಯವಸ್ಥೆ ಉತ್ತಮಗೊಳಿಸಲು ಪ್ರತಿ ಶೋನಲ್ಲೂ ಎರಡು ಇಂಟರ್ವಲ್ ಕಡ್ಡಾಯ. ಪ್ರಮುಖ ಸ್ಥಳದಲ್ಲಿ ಕೋವಿಡ್ ನಿಯಂತ್ರಣ ಕುರಿತ ಜಾಗೃತಿ ಪ್ರದರ್ಶನ ಕಡ್ಡಾಯ. ಪ್ರೇಕ್ಷಕರು ಕೋವಿಡ್ ನಿಯಮ ಪಾಲಿಸಿಯೇ ಸಿನಿಮಾ ನೋಡಬೇಕು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.
ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ : ಪ್ರೊ. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ
ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ(Karnataka Govt) ಮಾತ್ರ ಇದಕ್ಕೆ ನಿರ್ಬಂಧ ವಿಧಿಸಿತ್ತು. ಕರೊನಾ 2ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಚಿತ್ರ ಮಂದಿರಗಳಲ್ಲಿ ಶೇ.50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡಬೇಕು ಎಂದು ಆದೇಶಿಸಿತ್ತು. ಸರ್ಕಾರದ ಈ ನಡೆಗೆ ಆಕ್ರೋಶಗೊಂಡ ಸ್ಯಾಂಡಲ್ವುಡ್ನ ದಿಗ್ಗಜ್ಜರು, ಎಲ್ಲರಿಗೂ ಶೇ.100 ಅಕ್ಯುಪೆನ್ಸಿ ಕೊಟ್ಟಿರುವಾಗ, ನಮಗೆ ಮಾತ್ರ ಶೇ.50 ಏಕೆ? ಎಲ್ಲರಿಗೂ ನಾರ್ಮಲ್, ನಮಗ್ಯಾಕೆ ಅಬ್ ನಾರ್ಮಲ್? 'ಬಸ್ನಲ್ಲಿ ಫುಲ್ ರಶ್, ಮಾರ್ಕೆಟ್ನಲ್ಲಿ ಗಿಜಿ ಗಿಜಿ, ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ?' ಎಂದು ಕಟುವಾಗಿಯೇ ಪ್ರಶ್ನಿಸಿದ್ದರು.
Aero India 2021 : ಅತ್ಯಾಧುನಿಕ ತೇಜಸ್ ಯುದ್ಧವಿಮಾನದಲ್ಲಿ ನಭಕ್ಕೆ ಹಾರಿದ ತೇಜಸ್ವಿ ಸೂರ್ಯ
ಸ್ಯಾಂಡಲ್ವುಡ್ ಸಿಡಿದೇಳುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನಿನ್ನೆ(ಬುಧವಾರ) ಸಂಜೆ ಚಿತ್ರೋದ್ಯಮದ ಎಲ್ಲ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಇದೀಗ ಚಿತ್ರಮಂದಿರ ಹೌಸ್ಫುಲ್ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
Farmers Bill: ರೈತರ ಕೃಷಿ ಮಸೂದೆಗೆ ಬೆಂಬಲ ಸೂಚಿಸಿದ ಅಮೇರಿಕ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.