'ಮೊದಲು ಕ್ಷಮೆ ಕೇಳಿ'.. ಕರ್ನಾಟಕದಲ್ಲಿ ಚಿತ್ರ ಯಾಕೆ ಬಿಡುಗಡೆಯಾಗಬೇಕು? : ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ

Karnataka High Court slams Kamal Haasan : ತಮ್ಮ 'ಥಗ್ ಲೈಫ್' ಚಿತ್ರ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ನೀಡುವಂತೆ ಮತ್ತು ಭದ್ರತೆ ಕೋರಿ ಕಮಲ್ ಹಾಸನ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

Written by - Chetana Devarmani | Last Updated : Jun 3, 2025, 01:06 PM IST
  • ಕ್ಷಮೆ ಕೇಳಲಾಗದಿದ್ದರೆ ಬಿಡಿ
  • ಕರ್ನಾಟಕದಲ್ಲಿ ಬಿಡುಗಡೆ ಏಕೆ ಬೇಕು
  • ಕಮಲ್ ಹಾಸನ್ ಗೆ ಕರ್ನಾಟಕ ಹೈಕೋರ್ಟ್ ತರಾಟೆ
'ಮೊದಲು ಕ್ಷಮೆ ಕೇಳಿ'.. ಕರ್ನಾಟಕದಲ್ಲಿ ಚಿತ್ರ ಯಾಕೆ ಬಿಡುಗಡೆಯಾಗಬೇಕು? : ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ
ಕಮಲ್‌ ಹಾಸನ್

ಬೆಂಗಳೂರು: ಕಮಲ್ ಹಾಸನ್ ಅವರಿಗೆ ಕರ್ನಾಟಕ ಹೈಕೋರ್ಟ್‌ ಛೀಮಾರಿ ಹಾಕಿದೆ. ಮೊದಲು ಕ್ಷಮೆ ಕೇಳಿ ಎಂದು ಹೇಳಿದೆ. ಕಮಲ್‌ ಹಾಸನ್‌ ನಟನೆಯ ‘ಥಗ್ ಲೈಫ್’ ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ವಿರೋಧ ಉಂಟಾದ ಬೆನ್ನಲ್ಲೇ ಸಿನಿಮಾ ರಿಲೀಸ್‌ಗೆ ಭದ್ರತೆ ಕೋರಿ ಕಮಲ್‌ ಹಾಸನ್‌ ಕೋರ್ಟ್‌ ಮೆಟ್ಟಿಲೇರಿದ್ದರು.

Add Zee News as a Preferred Source

ಕನ್ನಡದ ಬಗ್ಗೆ ತಪ್ಪು ಹೇಳಿಕೆ ನೀಡಿ ಆ ಬಳಿಕ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಹಾಸನ್ ವಾದ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು ಥಗ್‌ ಲೈಫ್‌ ಸಿನಿಮಾ ರಿಲೀಸ್‌ ಮಾಡಲು ಅವಕಾಶ ನೀಡಲ್ಲ ಎಂದಿದ್ದಾರೆ. ಹೀಗಾಗಿ ‘ಥಗ್ ಲೈಫ್ ‘ ರಿಲೀಸ್‌ಗೆ ಭದ್ರತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆದಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದೆ. 

ಕಮಲ್ ಹಾಸನ್‌ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ಸಿ. ರಾಜಗೋಪಾಲಚಾರಿ ಇದೇ ರೀತಿಯ ಹೇಳಿಕೆ ನೀಡಿದ್ದರು. ನಂತರ ಅವರು ಕ್ಷಮಾಯಾಚನೆ ಮಾಡಿದ್ದರು. ಆದರೆ ಕಮಲಹಾಸನ್ ಯಾವುದೇ ಕ್ಷಮಾಯಾಚನೆ ಮಾಡಿಲ್ಲ" ಎಂದು ಪೀಠ ತಿಳಿಸಿದೆ.

"ಸಿನಿಮಾ ಮಾಡಿರೋದು ವಾಣಿಜ್ಯ ಉದ್ದೇಶದಿಂದ. ಈಗ ತಪ್ಪು ಮಾಡಿದ್ದಾರೆ. ಅಂದಮೇಲೆ ಕ್ಷಮೆ ಕೇಳಬೇಕು. ನೀವು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ" ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಕಮಲ್ ಹಾಸನ್‌ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.

"ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಅನುಭವಿಸುವಂತಾಗಿದೆ. ಶಿವರಾಜುಕುಮಾರ್‌ಗೆ ಕೂಡ ಇದರಿಂದ ಸಮಸ್ಯೆಯಾಗಿದೆ. ನಿಮ್ಮ ಹೇಳಿಕೆ ನೀರಾಕರಿಸಿದ್ದೀರಾ? ಇಲ್ಲ. ನೀವು ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ. ನೀವು ಕ್ಷಮೆಯಾಚಿಸಿದರೆ ಸಮಸ್ಯೆ ಇಲ್ಲ. ಆದರೆ ಕಮಲ್ ಕ್ಷಮೆಕೇಳಲು ಸಿದ್ದವಿಲ್ಲ" ಎಂದು ಛೀಮಾರಿ ಹಾಕಿದ್ದಾರೆ. 

ಇದನ್ನೂ ಓದಿ: ಖ್ಯಾತ ನಟಿಗೆ ಪಬ್ಲಿಕ್‌ನಲ್ಲೇ ʻಬ್ಯಾಡ್‌ ಟಚ್‌ʼ.. ಭದ್ರತಾ ಸಿಬ್ಬಂದಿಯಿಂದಲೇ 'ಲೈಂಗಿಕ ಕಿರುಕುಳ'!

"ಕರ್ನಾಟಕದಲ್ಲಿ ಚಿತ್ರಯಾಕೆ ಬಿಡುಗಡೆಯಾಗಬೇಕು. ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ. ನಾನೂ ಥಗ್ ಲೈಫ್ ಸಿನಿಮಾ ನೋಡಲು ಬಯಸಿದ್ದೆ. ಆದರೆ ಈ ವಿವಾದದಿಂದ ನೋಡಲು ಸಾಧ್ಯವಿಲ್ಲ. ಆದೇಶ ಹೊರಡಿಸಲು ನಮಗೆ ಸಮಸ್ಯೆ ಇಲ್ಲ. ಕ್ಷಮೆ ಕೇಳಲಾಗದಿದ್ದರೆ ಬಿಡಿ. ಕರ್ನಾಟಕದಲ್ಲಿ ಬಿಡುಗಡೆ ಏಕೆ ಬೇಕು. ಯಾರೊಬ್ಬರ ಭಾವನೆಯ ಮೇಲೆ ಸವಾರಿ ಮಾಡಬಾರದು" ಎಂದು ಹೇಳಿದ್ದಾರೆ.

"1950 ರಲ್ಲಿ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದಾರೆ. ಈಗ ನಿಮ್ಮ ತಪ್ಪಿಗೆ ಕ್ಷಮೆ ಕೇಳಲು ಏನು ಸಮಸ್ಯೆ. 300  ಕೋಟಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ. ನಿಮ್ಮ ನಿಲುವೇನು ತಿಳಿಸಿ" ಎಂದು ಹೈಕೋರ್ಟ್ ಸೂಚನೆ ನೀಡಿದೆ. 

ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ ಮಾಡಿದ್ದು, ನಿಲುವೇನು ಎಂದು ತಿಳಿಸಲು ಸಮಯ ನೀಡಲಾಗಿದೆ. 

ಇದನ್ನೂ ಓದಿ: ಅಪಘಾತದಲ್ಲಿ ಮುದ್ದಿನ ಮಗಳನ್ನು ಕಳೆದುಕೊಂಡು ಕಣ್ಣೀರಿಟ್ಟ ಕನ್ನಡ ಕಿರುತೆರೆಯ ಫೇಮಸ್‌ ನಟಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News