ಸೆಟ್ಟೇರಿತು ‘ಕರ್ನಾಟಕ Love’s ಕೇರಳ’.. ಹೀರೋ ಆದ ಬಸ್ ಮೆಕಾನಿಕಲ್.!

Kannada Web series: ಕರ್ನಾಟಕ Love’s ಕೇರಳ’ ಸಿರೀಸ್ ಗೆ ಗರುಡ ರಾಮ್ ಕ್ಲಾಪ್ ಮಾಡಿದ್ದು, ವೀರಕಪುತ್ರ ಶ್ರೀನಿವಾಸ್  ಕ್ಯಾಮೆರಾ ಚಾಲನೆ ನೀಡಿದ್ದಾರೆ

Written by - YASHODHA POOJARI | Last Updated : Mar 25, 2024, 03:02 PM IST
  • ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಬಸ್ ಮೆಕಾನಿಕಲ್
  • ಸೆಟ್ಟೇರಿತು ‘ಕರ್ನಾಟಕ Love’s ಕೇರಳ’ ವೆಬ್ ಸಿರೀಸ್
  • ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ಚಾಲನೆ
ಸೆಟ್ಟೇರಿತು ‘ಕರ್ನಾಟಕ Love’s ಕೇರಳ’.. ಹೀರೋ ಆದ ಬಸ್ ಮೆಕಾನಿಕಲ್.!  title=

Kannada Web series: ಸ್ಯಾಂಡಲ್ವುಡ್ನಲ್ಲಿ ಈಗ ಹೊಸಬರಿಗೆ ವಿಫುಲ ಅವಕಾಶವಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ 'ಕರ್ನಾಟಕ Love’s ಕೇರಳ’ ಎಂಬ ವೆಬ್ ಸಿರೀಸ್ ರೂಪಿಸುತ್ತಿದೆ.‌ ಅದರ ಮೊದಲ ಭಾಗವಾಗಿ ಇತ್ತೀಚೆಷ್ಟೇ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ಚಿತ್ರ ಸೆಟ್ಟೇರಿದೆ. 'ಕರ್ನಾಟಕ Love’s ಕೇರಳ’ ಸಿರೀಸ್ ಗೆ ಗರುಡ ರಾಮ್ ಕ್ಲಾಪ್ ಮಾಡಿದ್ದು, ವೀರಕಪುತ್ರ ಶ್ರೀನಿವಾಸ್  ಕ್ಯಾಮೆರಾ ಚಾಲನೆ ನೀಡಿದ್ದಾರೆ

ಇದನ್ನೂ ಓದಿ: ಪೃಥ್ವಿರಾಜ್‌ ಸುಕುಮಾರನ್ ಅಭಿನಯದ ನೈಜಕಥೆ ಆಧಾರಿತ 'ಆಡು ಜೀವಿತಂ' ರಿಲೀಸ್‌ ಡೇಟ್‌ ಫಿಕ್ಸ್‌

‘ಕರ್ನಾಟಕ Love’s ಕೇರಳ’ ವೆಬ್ ಸರಣಿಗೆ ಯುವ ಪ್ರತಿಭೆ ಲೋಕೇಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಬಸ್ ಮೆಕಾನಿಕಲ್ ಆಗಿರುವ ಲೋಕೇಶ್‌‌ ಒಂದಷ್ಟು ಕಿರುಚಿತ್ರಗಳಿಗೆ ನಿರ್ದೇಶಿಸಿದ್ದಾರೆ. ಹಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿಯಿಸಿದ್ದು , ಪೂರ್ಣ ಪ್ರಮಾಣದ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಇವರಿಗೆ ಜೋಡಿಯಾಗಿ ಜ್ಯೋತಿ, ಸಹನ ಸಾಥ್ ಕೊಟ್ಟಿದ್ದಾರೆ.

ಎಂಎಂಕೆ ಬಾಲು ನಿರ್ಮಾಣ‌ ಮಾಡುತ್ತಿರುವ ಕರ್ನಾಟಕದ love's ಕೇರಳ ಸಿರೀಸ್ ಗೆ ಲೋಕೇಶ್ ಅವರದ್ದೇ ಕಥೆ ಚಿತ್ರಕಥೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ‌‌ ಒಳಗೊಂಡಿದೆ. ಆನಂದ್ ಇಳಯರಾಜ ಛಾಯಾಗ್ರಹಣ, ಪ್ರವೀಣ್ ಶ್ರೀನಿವಾಸ್ ಸಂಗೀತ,  ಮಹೇಶ್ ಸಂಕಲನ ಸರಣಿಗಿದೆ.‌ ಮುಂದಿನ ವಾರದಿಂದ ಕೇರಳ ಭಾಗದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ.

ಇದನ್ನೂ ಓದಿ: ತನಗಿಂತ 11 ವರ್ಷ ಚಿಕ್ಕ ನಟನ ಜೊತೆ ಎರಡನೇ ಮದುವೆಯಾದ ನಟಿ ಜಯಮಾಲಾ.!? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News