Karnataka Ratna Puneeth Rajkumar : ನವೆಂಬರ್ 1 (ಇಂದು) ನಟ ಪುನೀತ್​ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್‌ ಮತ್ತು ಟಾಲಿವುಡ್‌ ಖ್ಯಾತ ನಟ ಜ್ಯೂ. ಎನ್‌ಟಿಆರ್‌ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ಡಾ. ಪುನೀತ್‌ ರಾಜಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತಿಯ ಪರವಾಗಿ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಗೆಳೆಯನ ಅದ್ಭುತ ಕಾರ್ಯಕ್ರಮಕ್ಕೆ ನಂದಮೂರಿ ತಾರಕ ರಾಮರಾವ್‌ ಸಾಕ್ಷಿಯಾದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಅಪ್ಪುಗೆ ʻಕರ್ನಾಟಕ ರತ್ನʼ ಪ್ರಶಸ್ತಿ ಪ್ರದಾನ ಹಿನ್ನೆಲೆ ನಿಮಿಷಾಂಭ ದೇಗುಲಕ್ಕೆ ಶಿವಣ್ಣ ಭೇಟಿ


ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ 'ಕರ್ನಾಟಕ ರತ್ನ' ನೀಡಿ ಗೌರವಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್​ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವ ಸಲ್ಲಿಸಿದ್ದಾರೆ. 


ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುನೀತ್ ಸಹೋದರರಾದ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬದವರು ಪಾಲ್ಗೊಂಡಿದ್ದರು. ವಿಧಾನಸೌಧದ ಮುಂದೆ ಸಾವಿರಾರು ಅಪ್ಪು ಅಭಿಮಾನಿಗಳು ನೆರೆದಿದ್ದರು. ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಮಕ್ಕೆ ಮಳೆ ಅಡ್ಡಿಯಾದರೂ ಯಾರೂ ಕೂಡ ತಾಳ್ಮೆ ಕಳೆದು ಕೊಳ್ಳದೇ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.


ಇದನ್ನೂ ಓದಿ : "ಡಾ. ರಾಜ್ ಮತ್ತು ಗೋಕಾಕ್ ಚಳುವಳಿ" : ಮಾತೃಭಾಷೆಯ ಉಳಿವಿಗೆ ನಡೆದ ಹೋರಾಟದ ಮೆಲುಕು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.