ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ "ವೇದ" ಚಿತ್ರ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.


COMMERCIAL BREAK
SCROLL TO CONTINUE READING

ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸಚಿತ್ರದ ಬಗ್ಗೆ ಮಾಹಿತಿ ಬಂದಿದೆ. ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ ಈ ನೂತನ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ನಿತಿನ್ ಶಿವಾರ್ಜುನ್ ಈ ಚಿತ್ರದ ಸಹ ನಿರ್ಮಾಪಕರು. ಈ ಸಂಸ್ಥೆಯಿಂದ ಹಿಂದೆ "ಶಿವಾರ್ಜುನ" ಚಿತ್ರ ನಿರ್ಮಾಣವಾಗಿತ್ತು.


ಇದನ್ನೂ ಓದಿ : Diabetes: ಈ ತರಕಾರಿ ಸೇವಿಸಿದ್ರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು


ಕನ್ನಡದ ಸುಪ್ರಸಿದ್ಧ ರಿಯಾಲಿಟಿ ಶೋ "ಮಜಾಟಾಕೀಸ್" ಹಾಗೂ ಸೃಜನ್ ಲೋಕೇಶ್ ಅಭಿನಯದ "ಎಲ್ಲಿದೆ ಇಲ್ಲಿತನಕ" ಚಿತ್ರದ ನಿರ್ದೇಶಕ ತೇಜಸ್ವಿ ಕೆ ನಾಗ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ 


ಶಿವಣ್ಣ ಈ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜಕುಮಾರ್ ಅವರು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿರ್ದೇಶಕ ತೇಜಸ್ವಿ ಕೆ ನಾಗ್ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.