ಐ ಹ್ಯಾಮ್ ಕಮಿಂಗ್ ಎಂದ `ಕರುನಾಡ ಕಿಂಗ್`...ಶಿವಣ್ಣನ ಜನ್ಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್
Shivarajkumar : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ.
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ. ಆ ಸ್ಪೆಷಲ್ ಗಿಫ್ಟ್ ಗಳಲ್ಲಿ ತುಂಬಾನೇ ಸ್ಪೆಷಲ್ ಎನಿಸಿಕೊಂಡಿರುವುದು ಶಿವಣ್ಣನ 131ನೇ ಚಿತ್ರದ ಝಲಕ್...ಯಾಕೆ ವಿಶೇಷ ಅಂದರೆ ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೊದಲ ಝಲಕ್ ಶಿವಣ್ಣನ ಹುಟ್ಟುಹಬ್ಬಕ್ಕೆ ಅನಾವರಣಗೊಂಡಿದೆ.
ಇದನ್ನು ಓದಿ : ಕಲ್ಕಿ ಚಿತ್ರದ ಮೂಲಕ 55 ವರ್ಷಗಳಲ್ಲಿ ಕಾಣದ ಸಾಧನೆ ಮಾಡಿದ ಬಿಗ್ ಬಿ!! ಏನದು ?
50ನೇ ವಯಸ್ಸಿಗೆ ಮದುವೆಯಾಗಿದ್ದ ನಟಿ ಪಂಡರಿಬಾಯಿ ಪತಿ ಯಾರು ಗೊತ್ತಾ? ಇವರು ಸಖತ್ ಫೇಮಸ್!! ಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.