)
Vijay Thalapathy: ಟಿವಿಕೆ ಪಕ್ಷದ ನಾಯಕ ಮತ್ತು ನಟ ದಳಪತಿ ವಿಜಯ್ ಕರೂರಿನಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತದಲ್ಲಿ 29 ಜನರು ಸಾವನ್ನಪ್ಪಿದ್ದಾರೆ. ಇತರ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಸತ್ತವರಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮೂವರು ಮಕ್ಕಳು ಸೇರಿದ್ದು, ಅನೇಕ ಜನರು ಗಂಭೀರ ಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಇಲಾಖೆ ತಿಳಿಸಿದೆ.
Here’s Thalapathy VIJAY’s super mass full speech from Karur ?? #உங்கவிஜய்_நா_வரேன்
— Vijay Fans Trends (@VijayFansTrends) September 27, 2025
ಈ ಘಟನೆಯಿಂದಾಗಿ ವಿಜಯ್ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ, ತಕ್ಷಣದ ಸಹಾಯಕ್ಕಾಗಿ ಪೊಲೀಸರು ಮತ್ತು ಕಾರ್ಯಕರ್ತರ ಸಹಾಯವನ್ನು ಕೋರಿದರು. ವಿಜಯ್ಗಾಗಿ ಸಾವಿರಾರು ಜನರು ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ಆಂಬ್ಯುಲೆನ್ಸ್ಗಳು ಮತ್ತು ವೈದ್ಯಕೀಯ ತಂಡಗಳು ತಕ್ಷಣ ಆಗಮಿಸಿ, ಗಾಯಾಳುಗಳಿಗೆ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಮತ್ತು ನೀರಿನ ಬಾಟಲಿಗಳನ್ನು ವಿತರಿಸಲಾಯಿತು.
ಸದ್ಯ ಈ ಘಟನೆ ಕರೂರು ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಈ ಪರಿಸ್ಥಿತಿಯಲ್ಲಿ, 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ದುರಂತದಿಂದ ಪೊಲೀಸರು ಟಿವಿಕೆ ನಾಯಕ ವಿಜಯ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ..