Keerthy Suresh : ರಿವೀಲ್ ಆಯ್ತು ‘ದಸರಾ’ದಲ್ಲಿ ಕೀರ್ತಿ ಸುರೇಶ್ ಲುಕ್!

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ‘ದಸರಾ’ ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. 

Written by - YASHODHA POOJARI | Edited by - Chetana Devarmani | Last Updated : Oct 19, 2022, 04:47 PM IST
  • ರಿವೀಲ್ ಆಯ್ತು ‘ದಸರಾ’ದಲ್ಲಿ ಕೀರ್ತಿ ಸುರೇಶ್ ಲುಕ್
  • ಹಳ್ಳಿ ಹುಡುಗಿಯಾಗಿ ಮಿಂಚಲಿದ್ದಾರೆ ಮಹಾನಟಿ
Keerthy Suresh : ರಿವೀಲ್ ಆಯ್ತು ‘ದಸರಾ’ದಲ್ಲಿ ಕೀರ್ತಿ ಸುರೇಶ್ ಲುಕ್!   title=
ದಸರಾ

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ‘ದಸರಾ’ ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಮೂಲಕ ನಾನಿ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ತಲುಪಲಿದ್ದು, ಮಾಸ್ ಅವತಾರದಲ್ಲಿ ರಂಜಿಸಲಿದ್ದಾರೆ. ಖಡಕ್ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ನಾನಿಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ನಾಯಕ ನಟಿಯಾಗಿ ಅಭಿನಯಿಸುತ್ತಿದ್ದಾರೆ. 

ಇದನ್ನೂ ಓದಿ : 'ಪುನೀತ್ ಪರ್ವ'ಕ್ಕೆ ಯಾರೆಲ್ಲಾ ಸಾಕ್ಷಿಯಾಗಲಿದ್ದಾರೆ? ರಾಘಣ್ಣ ಹಂಚಿಕೊಂಡ್ರು ಕಂಪ್ಲೀಟ್‌ ಡಿಟೇಲ್ಸ್‌

ಮಾಸ್ ಸಿನಿಮಾ ‘ದಸರಾ’ದಲ್ಲಿ ಕೀರ್ತಿ ಸುರೇಶ್ ಯಾವ ರೀತಿ ಕಾಣಸಿಗುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿ ಬಳಗದಲ್ಲಿತ್ತು. ಆ ಕುತೂಹಲವನ್ನು ಹಾಗೆ ಕಾಪಾಡಿಕೊಂಡು ಬಂದಿದ್ದ ಚಿತ್ರತಂಡ ಕೀರ್ತಿ ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿದೆ. ನಾನಿ ಹೊಸ ಅವತಾರ ಖಡಕ್ ಲುಕ್ ಕಂಡು ಫಿದಾ ಆಗಿದ್ದ ಸಿನಿರಸಿಕರಿಗೆ, ಕೀರ್ತಿ ಸುರೇಶ್ ಲುಕ್ ಕೂಡ ಅಷ್ಟೇ ಮನಸೆಳೆದಿದೆ. ಚಿತ್ರದಲ್ಲಿ ವೆನ್ನಲ ಪಾತ್ರವನ್ನು ನಿಭಾಯಿಸುತ್ತಿದ್ದು, ಹಳ್ಳಿ ಹುಡುಗಿಯಾಗಿ ಹಳದಿ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಅವತಾರಕ್ಕೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ. 

ಈಗಾಗಲೇ ಬಿಡುಗಡೆಯಾಗಿರುವ ನಾನಿ ಫಸ್ಟ್ ಲುಕ್, ಧೂಮ್ ದಾಮ್ ದೊಸ್ತಾನ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದೆ. ಇದೀಗ ಕೀರ್ತಿ ಸುರೇಶ್ ಲುಕ್ ಕೂಡ ಎಲ್ಲರ ಗಮನ ಸೆಳೆದಿದೆ. ಇವೆಲ್ಲವೂ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. 

ಶ್ರೀಕಾಂತ್ ಒಡೆಲಾ ನಿರ್ದೇಶಿಸುತ್ತಿರುವ ಈ ಚಿತ್ರ ಮಾಸ್ ಅಂಡ್ ಆಕ್ಷನ್ ಕಥಾಹಂದರ ಒಳಗೊಂಡಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್  ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. 2023 ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ. 

ಇದನ್ನೂ ಓದಿ : ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂಬ ಹೇಳಿಕೆಗೆ ನಟ ಚೇತನ್‌ ಸ್ಪಷ್ಟನೆ

ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ, ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News