Jawan : ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಅವರ ಹೊಸ ಚಿತ್ರ 'ಜವಾನ್' ಥಿಯೇಟರ್‌ಗಳಲ್ಲಿ ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ಅಟ್ಲಿ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಸೆಪ್ಟೆಂಬರ್ 07 ರಂದು ತೆರೆಗೆ ಅಪ್ಪಳಿಸಿರುವ ಈ ಸಿನಿಮಾ ನಿರೀಕ್ಷೆಗೂ ಮೀರಿದ ರೇಂಜ್ ನಲ್ಲಿ ಕಲೆಕ್ಷನ್ ಮಾಡುತ್ತಿದೆ. 


COMMERCIAL BREAK
SCROLL TO CONTINUE READING

ವಾರದೊಳಗೆ ಈ ಸಿನಿಮಾ ರೂ.650 ಕೋಟಿ ಕಲೆಕ್ಷನ್ ಮಾಡಿದೆ. ಅಲ್ಲದೇ ಬಿಡುಗಡೆಯಾದ ಒಂದು ವಾರದಲ್ಲಿ 600 ಕೋಟಿ ಗಡಿ ದಾಟಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸಿನಿಮಾದಲ್ಲಿ ಶಾರುಖ್ ಅಭಿನಯಕ್ಕೆ ಪ್ರೇಕ್ಷಕರು ಮಾತ್ರವಲ್ಲ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. 


ಇದನ್ನೂ ಓದಿ-Jawan: ಶಾರುಖ್ ಸಿನಿಮಾ ಪೈರೇಟೆಡ್ ಕಂಟೆಂಟ್‌ ಮಾರಾಟ ಮಾಡುವವರ ವಿರುದ್ಧ ದೂರು ದಾಖಲು!!


ಈ ಸಿನಿಮಾದಲ್ಲಿನ ‘ಚಲೇಯ’ ಹಾಡು ಎಷ್ಟು ಹಿಟ್ ಆಗಿತ್ತು ಎಂಬುದು ನಮಗೆಲ್ಲ ಗೊತ್ತೇ ಇದೆ. ಈ ಹಾಡಿಗೆ ಪ್ರಪಂಚದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಾಡಿಗೆ ಡ್ಯಾನ್ಸ್ ಮಾಡಿರುವ ವಿಡಿಯೋವನ್ನು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.


ಅದೇ ರೀತಿ ಇತ್ತೀಚೆಗಷ್ಟೇ ಸೌತ್‌ ನಟಿ ಕೀರ್ತಿ ಸುರೇಶ್ ಹಾಗೂ ಅಟ್ಲಿ ಪತ್ನಿ ಪ್ರಿಯಾ ಮೋಹನ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಮೊದಲಿನಿಂದಲೂ ಅಟ್ಲಿ ಕುಟುಂಬದೊಂದಿಗೆ ಕೀರ್ತಿ ಸುರೇಶ್ ಉತ್ತಮ ಬಾಂಧವ್ಯ ಹೊಂದಿದ್ದು ಗೊತ್ತೇ ಇದೆ.  ಸದ್ಯ ಈ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 


ಇದನ್ನೂ ಓದಿ-ವಿಜಿ-ಸ್ಯಾಮ್‌ ಅಭಿನಯದ 'ಖುಷಿ' ಸಿನಿಮಾ OTT ರಿಲೀಸ್‌ ಡೇಟ್‌ ಫಿಕ್ಸ್‌...!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.