ಬೆಂಗಳೂರು: ಎಪ್ರಿಲ್ 14 ರಂದು ವಿಶ್ವದಾದ್ಯಂತ ಕೆಜಿಎಫ್ 2 ಚಿತ್ರವು ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನೇ ನಿರ್ಮಿಸುತ್ತಿದೆ. ಈಗಾಗಲೇ 1000 ಕೋಟಿ ಕ್ಲಬ್ ನ್ನು ತಲುಪುವ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರ ಜೊತೆಗೆ ಈಗ ಹಿಂದಿ ಆವೃತ್ತಿಯಲ್ಲಿ ಬಾಹುಬಲಿ 2 ನಂತರ ಬಾಕ್ಸ್ ಆಫೀಸ್ ನಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಖ್ಯಾತಿಯನ್ನು ಕೆಜಿಎಫ್ 2 ಹೊಂದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಖರೀದಿ ಮಾಡಿದ್ದು 90 ಎಲೆಕ್ಟ್ರಿಕ್ ಬಸ್- ಆದ್ರೆ ರಸ್ತೆಗಿಳಿದಿರೋದು ಕೇವಲ 28 ಬಸ್


ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎನ್ನುವಂತೆ ತಮಿಳುನಾಡಿನಲ್ಲಿ 100 ಕೋಟಿ ಗಡಿ ದಾಟಿದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಅಷ್ಟೇ ಅಲ್ಲದೆ ನಾಲ್ಕು ಭಾಷೆಗಳಲ್ಲಿ 100 ಕೋಟಿ ಗಡಿ ದಾಟಿದ ಮೊದಲ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಕೆಜಿಎಫ್ 2 ಚಿತ್ರ ಪಾತ್ರವಾಗಿದೆ.ಇದಕ್ಕೂ ಮೊದಲು ಬಾಹುಬಲಿ ಸ್ಯಾಂಡಲ್ ವುಡ್ ವೊಂದನ್ನು ಹೊರತುಪಡಿಸಿ ಉಳಿದೆಲ್ಲಾ ಭಾಷೆಗಳಲ್ಲಿ 100 ಕೋಟಿ ಗಡಿಯನ್ನು ದಾಟಿತ್ತು. ಆಗ ಅದು ಕನ್ನಡದಲ್ಲಿ ಡಬ್ಬಿಂಗ್ ರೂಪದಲ್ಲಿ ಬಿಡುಗಡೆಯಾಗಿರಲಿಲ್ಲ.ಒಮ್ಮೆ ಫುಲ್ ಚಾರ್ಜ್ ಮಾಡಿದರೆ 300 ಕಿಮೀ ವರೆಗೆ ಮೈಲೇಜ್ ನೀಡುತ್ತಂತೆ ಈ ಹೊಸ ಸ್ಕೂಟರ್


ಈಗ ಈದ್ ಹಿನ್ನಲೆಯಲ್ಲಿ ಕೆಜಿಎಫ್ 2 ಚಿತ್ರ ನೋಡಲು ಧಾವಿಸುತ್ತಿರುವವರು ಸಂಖ್ಯೆ ಅಧಿಕವಾಗಿದೆ.ಅಚ್ಚರಿ ಏನೆಂದರೆ ಜರ್ಸಿ, ರನ್ವೇ 34, ಹಾಗೂ ಹೀರೋಪಂತಿ 2 ಯಂತಹ ಹಿಂದಿ ಚಿತ್ರಗಳು ಬಿಡುಗಡೆಯಾದರೂ ಸಹ ಹಿಂದಿ ಬೆಲ್ಟ್ ನಲ್ಲಿ ಕೆಜಿಎಫ್ 2 ಚಿತ್ರವು ಭರ್ಜರಿಯಾಗಿ ಪ್ರದರ್ಶನವಾಗುತ್ತಿದೆ.ಈಗ ಬಾಕ್ಸ್ ಆಫೀಸ್ ನಲ್ಲಿರುವ ಈಗಿನ ಟ್ರೆಂಡ್ ನ್ನು ನೋಡಿದರೆ ಈ ಚಿತ್ರವು ಸುಲಭವಾಗಿ 1100 ಗಡಿಯನ್ನು ಸುಲಭವಾಗಿ ದಾಟಲಿದೆ ಎನ್ನಲಾಗುತ್ತಿದೆ.


ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಮತ್ತು ಪ್ರಕಾಶ್ ರಾಜ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಇನ್ನೂ ನಿಲ್ಲದ ಕುದುರೆ ಎನ್ನಲಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.