ಬೆಂಗಳೂರು: 'ಕೆಜಿಎಫ್-2' ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದಿದ್ದು, ಗಳಿಕೆಯಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದುಹಾಕಿದೆ. ರಾಕಿಂಗ್ ಸ್ಟಾರ್ ಯಶ್ ಇದೀಗ ಬಾಕ್ಸ್ ಆಫೀಸ್ ಸುಲ್ತಾನನಾಗಿ ಮೆರೆಯುತ್ತಿದ್ದಾರೆ. ಏ.14ರಂದು ಸುಮಾರು 10 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ರಿಲೀಸ್ ಆದ 'ಕೆಜಿಎಫ್-2' ಸಿನಿಮಾ ಗಳಿಕೆಯಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ದೇಶ-ವಿದೇಶಗಳಲ್ಲಿ 'ಕೆಜಿಎಫ್-2' ಸಿನಿಮಾಗೆ ದೊಡ್ಡ ಯಶಸ್ಸು ಸಿಕ್ಕಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ‘ಸಲಾಂ ರಾಕಿಭಾಯ್’ ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಯಶ್ ವೃತ್ತಿಜೀವನಕ್ಕೆ ಬಹುದೊಡ್ಡ ಯಶಸ್ಸು ತಂದುಕೊಟ್ಟ 'ಕೆಜಿಎಫ್-2' ಮೇಕಿಂಗ್ ಕಂಡು ಪ್ರತಿಯೊಬ್ಬ ಪ್ರೇಕ್ಷಕರು ವಾವ್ಹ್ ಎಂದಿದ್ದಾರೆ. ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗೆ ತಲೆಬಾಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಅವರು ಮತ್ತೊಮ್ಮೆ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.


ಇದನ್ನೂ ಓದಿ: KGF Chapter 2 Records: ನಾಲ್ಕೇ ದಿನದಲ್ಲಿ 29 ದಾಖಲೆ ಬರೆದ ಕೆಜಿಎಫ್ ಚಾಪ್ಟರ್​ 2


ಕೇವಲ 6 ದಿನಕ್ಕೆ 676 ಕೋಟಿ ರೂ. ಗಳಿಕೆ!


ಕೆಜಿಎಫ್ 2 ಚಿತ್ರದ ಯಶಸ್ಸಿನ ನಂತರ ರಜನಿಕಾಂತ್ ಪುತ್ರಿ ಹೇಳಿದ್ದೇನು ಗೊತ್ತೇ?


ಹಿಂದಿಯಲ್ಲಿ ದಾಖಲೆ ಗಳಿಕೆ!


ಕೆಜಿಎಫ್-2' ಸಿನಿಮಾ ತೂಫಾನ್‍ನಂತೆ ಮುನ್ನುಗ್ಗುತ್ತಿದೆ. ಹಳೆಯ ಎಲ್ಲ ದಾಖಲೆಗಳನ್ನು ಉಡೀಸ್ ಮಾಡಿ ಹೊಸ ದಾಖಲೆಯನ್ನು ಬರೆಯುತ್ತಿದೆ. ದೇಶ ಮಾತ್ರವಲ್ಲದೆ ವಿದೇಶದಲ್ಲಿಯೂ ‘ರಾಕಿ’ ಅಬ್ಬರ ಜೋರಾಗಿದೆ.    


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.