Nano Narayanappa: ಹೀರೋ ಆಗಿ ಮಿಂಚಲು ರೆಡಿಯಾದ ‘ಕೆಜಿಎಫ್’ ತಾತ..!
10 ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದಾರೆ.
ಬೆಂಗಳೂರು: ‘ನಿಮಗೊಂದು ಸಲಹೆ ಕೊಡ್ತೀನಿ.. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋದಕ್ಕೆ ಹೋಗ್ಬೇಡಿ ಸಾರ್..’ ಎಂಬ ಡೈಲಾಗ್ ಮೂಲಕ ಕೆಜಿಎಫ್ ಸಿನಿಮಾದಲ್ಲಿ ಮಿಂಚಿದ್ದ ತಾತ ಇದೀಗ ಹೀರೋ..!
ಹೌದು, ‘ಕೆಜಿಎಫ್ 1 & 2’ ಸಿನಿಮಾದಲ್ಲಿ ಮುದುಕನ ಪಾತ್ರದಲ್ಲಿಕಾಣಿಸಿಕೊಂಡು ಡೈಲಾಗ್ ಮೂಲಕ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ‘ಕೆಜಿಎಫ್’ ತಾತ ಅಂತಾನೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ‘ನ್ಯಾನೋ ನಾರಾಯಣಪ್ಪ’ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದು, ಈ ಚಿತ್ರದ ಫಸ್ಟ್‍ಲುಕ್ ರಿಲೀಸ್ ಆಗಿದೆ.
ಇದನ್ನೂ ಓದಿ: Vikrant Rona: ʻವಿಕ್ರಾಂತ್ ರೋಣʼನ ಬಗ್ಗೆ ಹೀಗಂದ್ರು ಅಮಿತಾಬ್ ಬಚ್ಚನ್!
10 ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದಾರೆ. ನ್ಯಾನೋ ಕಾರು ಕೂಡ ಹೈಲೇಟ್ ಆಗಿದ್ದು, ಒಂದಷ್ಟು ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸ್ತಿದ್ದಾರೆ.
‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಉಣಬಡಿಸಿದ್ದ ನಿರ್ದೇಶಕ ಕುಮಾರ್ ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾದಲ್ಲಿ ಬೆಟ್ಟಿಂಗ್ ಧಂದೆಯ ಕರಾಳತೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದರು. ಇದೀಗ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಮೂಲಕ ಮತ್ತೊಮ್ಮೆ ಚಿತ್ರಪ್ರೇಮಿಗಳನ್ನು ಎಂಟರ್‍ಟೈನ್ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ಕುಮಾರ್ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಕೂಡ ಹೂಡಿದ್ದಾರೆ. ಇದೊಂದು ಕಾಮಿಡಿ ಎಮೋಷನಲ್ ಡ್ರಾಮ್ ಸಿನಿಮಾವಾಗಿದ್ದು, ತುಂಬಾ ಕಾಡುವ ಕಥೆ, ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಆಗಿದೆ ಅಂತಾ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: Shocking News: ಮನೆಮುಂದೆ ನೇಣುಬಿಗಿದ ಸ್ಥಿತಿಯಲ್ಲಿ ಖ್ಯಾತ ನಟನ ಶವ ಪತ್ತೆ..!
ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಆಗಸ್ಟ್ ನಲ್ಲಿ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ. ಕುಮಾರ್ ನಿರ್ಮಾಣದ ‘ನ್ಯಾನೋ ನಾರಾಯಣಪ್ಪ’ ಸಿನಿಮಾಗೆ ರಾಜಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ಸಿದ್ದು ಸಂಕಲನವಿದೆ. ಸದ್ಯ ಚಿತ್ರದ ಫಸ್ಟ್‍ಲುಕ್ ರಿವೀಲ್ ಮಾಡಿರುವ ಚಿತ್ರತಂಡ ಶೀರ್ಘವೇ ಟೀಸರ್ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ