ಬಹುನಿರೀಕ್ಷಿತ ಕೆಜಿಎಫ್ ಚಿತ್ರದ ಟ್ರೇಲರ್ ರಿಲೀಸ್....ಇಲ್ಲಿದೆ ಪಂಚ ಭಾಷೆಗಳ ಟ್ರೇಲರ್!!!

 70ರ ದಶಕದ ಕಾಲಘಟ್ಟದ ಕಥೆಯಲ್ಲಿ ಪಾತ್ರಕ್ಕಾಗಿ ಒಂದೂವರೆ ವರ್ಷ ಗಡ್ಡ, ಕೂದಲು ಬಿಟ್ಟು ರಫ್ ಅಂಡ್ ಟಫ್ ಲುಕ್​ನಲ್ಲಿ ಕಾಣಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಟ್ರೇಲರ್ ಇಂದು ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿದೆ.

Updated: Nov 9, 2018 , 02:55 PM IST
ಬಹುನಿರೀಕ್ಷಿತ ಕೆಜಿಎಫ್ ಚಿತ್ರದ ಟ್ರೇಲರ್ ರಿಲೀಸ್....ಇಲ್ಲಿದೆ ಪಂಚ ಭಾಷೆಗಳ ಟ್ರೇಲರ್!!!

ಬೆಂಗಳೂರು: ದೇಶಾದ್ಯಂತ ಭಾರಿ ಸದ್ದು ಮಾಡಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಿತ್ರದ ಟ್ರೇಲರ್ ಶುಕ್ರವಾರ ಮಧ್ಯಾಹ್ನ ಬಿಡುಗಡೆಯಾಗಿದೆ. 

ಹೊಂಬಾಳೆ ಪ್ರೊಡಕ್ಷನ್ಸ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಚಿತ್ರ ಸದ್ಯ ಬಾಲಿವುಡ್ ಸಿನಿಮಾಗಳಿಗೂ ಠಕ್ಕರ್ ಕೊಡೋವರೆಗೆ ಸಿದ್ಧವಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗಿರುವ ಈ ಚಿತ್ರದ ಬಹುನಿರೀಕ್ಷಿತ ಟ್ರೇಲರ್ ಇಂದು 5 ಭಾಷೆಗಳಲ್ಲಿ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿವೆ. ಆ ಸೂಪರ್ಬ್ ಟ್ರೇಲರ್ ಗಳು ನಿಮಗಾಗಿ...

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅತೀ ದೊಡ್ಡ ಬಜೆಟ್ ಸಿನಿಮಾ ಆಗಿರುವ ಕೆಜಿಎಫ್, ಇದೇ ಡಿಸೆಂಬರ್ 21ರಂದು ಐದು ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ. 70ರ ದಶಕದ ಕಾಲಘಟ್ಟದ ಕಥೆಯಲ್ಲಿ ಪಾತ್ರಕ್ಕಾಗಿ ಒಂದೂವರೆ ವರ್ಷ ಗಡ್ಡ, ಕೂದಲು ಬಿಟ್ಟು ರಫ್ ಅಂಡ್ ಟಫ್ ಲುಕ್​ನಲ್ಲಿ ಯಶ್​​​ ಕಾಣಿಸಿಕೊಂಡಿದ್ದಾರೆ. ಅವರ ಆಕ್ಟಿಂಗ್ ಕೂಡ ಈ ಚಿತ್ರದಲ್ಲಿ ಸಖತ್ ಡಿಫರೆಂಟ್ ಆಗಿದೆ ಎನ್ನಲಾಗುತ್ತಿದೆ. 

ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಭುವನ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಯಶ್ ಜೊತೆ ಶ್ರೀನಿಧಿ ಶೆಟ್ಟಿ, ಅನಂತ್ ನಾಗ್, ಮಾಳವಿಕಾ, ಟಿ.ಎಸ್.ನಾಗಾಭರಣ, ಬಿ,ಸುರೇಶ್, ಅಯ್ಯಪ್ಪ, ನೀನಾಸಂ ಅಶ್ವಥ್, ಅಚ್ಯುತ್ ಕುಮಾರ್, ರಾಮ್, ಅವಿನಾಶ್, ಲಕ್ಕಿ, ಹರೀಶ್ ರಾಯ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. 

ಏನೇ ಆಗಲಿ, ಭಾರತದ ಚಿತ್ರರಂಗದಲ್ಲೇ ಸಖತ್ ಸೌಂಡ್ ಮಾಡ್ತಿರೋ ಕೆಜಿಎಫ್ ಚಿತ್ರ, ಬಾಕ್ಸ್ ಆಫಿಸ್ ಕೊಳ್ಳೆ ಹೊಡೆಯೋದರಲ್ಲಿ ಯಾವುದೇ ಅನುಮಾನವಿಲ್ಲ... All d best KGF and Yash!!!