Prabhas Salaar 2 : ಡಾರ್ಲಿಂಗ್‌ ಪ್ರಭಾಸ್ ಮತ್ತು ಡೈರೆಕ್ಟರ್ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿದ ಬಂದ ಸಲಾರ್ ಸಿನಿಮಾ ಭಾರೀ ನಿರೀಕ್ಷೆಗಳ ನಡುವೆ ಬ್ಲಾಕ್ ಬಸ್ಟರ್ ಹಿಟ್‌ ಎನಿಸಿಕೊಂಡಿದೆ. ಪ್ಯಾನ್ ಇಂಡಿಯಾ ರೇಂಜ್ ನಲ್ಲಿ ಬಿಡುಗಡೆಯಾದ ಈ ಸಿನಿಮಾ ಎಲ್ಲಾ ಭಾಷೆಗಳಲ್ಲಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಎರಡನೇ ಭಾಗ ಈಗ ಸಲಾರ್ ಭಾಗ 2 ಶೌರ್ಯಾಂಗ ಪರ್ವಂ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಅವರಿಗಾಗಿ ಈ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ಅಪ್ಡೇಟ್ ಹೊರಬಿದ್ದಿದೆ.


COMMERCIAL BREAK
SCROLL TO CONTINUE READING

ಸಲಾರ್‌ 1 ಚಿತ್ರದಲ್ಲಿ ಬಾಲಿವುಡ್ ನಾಯಕಿ ಕಿಯಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿಲ್ಲ. ಎರಡನೇ ಭಾಗದಲ್ಲಿ ಶ್ರುತಿ ಹಾಸನ್ ಜೊತೆಗೆ ಈ ನಾಯಕಿ ಕೂಡ ಬಹುಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಈ ಚಿತ್ರದ ಹೊರತಾಗಿ ಕಿಯಾರಾ ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರದಲ್ಲೂ ಈ ನಟಿ ನಟಿಸುತ್ತಿದ್ದಾರೆ.


ಇದನ್ನೂ ಓದಿ:ಸಕಲೇಶಪುರದಲ್ಲಿ ನಾಗಿಣಿ ಖ್ಯಾತಿಯ ನಮೃತಾ : ಫೋಟೋಸ್ ವೈರಲ್


ಕಳೆದ ಕೆಲವು ದಿನಗಳಿಂದ ಪ್ರಶಾಂತ್ ನೀಲ್ ಅವರು ಸಲಾರ್ ಭಾಗ 2 ರ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಸಲಾರ್ 2 ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ, ಪ್ರಶಾಂತ್ ನೀಲ್ ಸ್ಕ್ರಿಪ್ಟ್‌ ಬಗ್ಗೆ ಪ್ರಭಾಸ್‌ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. 


ಹೊಂಬಾಳೆ ಫಿಲಂಸ್ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ. ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸಲಾರ್ ಪಾರ್ಟ್ 1 ಸಿನಿಮಾ ಬ್ಲಾಕ್ ಬಸ್ಟರ್ ಆದ ಕಾರಣ ಎರಡನೇ ಭಾಗವೂ ಬಾಕ್ಸ್‌ ಆಫೀಸ್‌ನಲ್ಲಿ ಸೌಂಡ್‌ ಮಾಡಲಿದೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.