ಕಿಚ್ಚನ ‘ಮ್ಯಾಕ್ಸ್’ ಆಟ ಶುರು! ಮಾಸ್ ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ

ಪ್ಯಾನ್-ಇಂಡಿಯಾ ಚಿತ್ರವಾದ ಮ್ಯಾಕ್ಸ್ ಒಂದು ಮಾಸ್ ಚಿತ್ರವಾಗಿದ್ದು, ಟೀಸರ್’ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ.

Written by - YASHODHA POOJARI | Last Updated : Jul 16, 2024, 01:28 PM IST
    • ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾದ ಟೀಸರ್ ಇಂದು ಬಿಡುಗಡೆ
    • ಕಿಚ್ಚ ಸುದೀಪ್’ರನ್ನು ಕಂಡು ಅಭಿಮಾನಿಗಳು ಉತ್ಸುಕರಾಗಿದ್ದಾರೆ
    • ಪ್ಯಾನ್-ಇಂಡಿಯಾ ಚಿತ್ರವಾದ ಮ್ಯಾಕ್ಸ್ ಒಂದು ಮಾಸ್ ಚಿತ್ರ
ಕಿಚ್ಚನ ‘ಮ್ಯಾಕ್ಸ್’ ಆಟ ಶುರು! ಮಾಸ್ ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ  title=
Max Movie

ಸಿನಿಮಾ ಸುದ್ದಿ: ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡಿದೆ. ಮಾಸ್-ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್’ರನ್ನು ಕಂಡು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಟೀಸರ್’ನಲ್ಲಿನ ಆಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು ಮಾಸ್ ಅಭಿಮಾನಿಗಳ ಕಣ್ಮನ ಸೆಳೆದಿದೆ.

ಇದನ್ನೂ ಓದಿ: ಊಟಕ್ಕೆ ಬಂದು ಗೆಳೆಯನ ಪತ್ನಿಯನ್ನೇ ಪಟಾಯಿಸಿ ಗರ್ಭಿಣಿಯನ್ನಾಗಿಸಿದ ಟೀಂ ಇಂಡಿಯಾದ ಕ್ರಿಕೆಟಿಗ ಈತನೇ!

ಪ್ಯಾನ್-ಇಂಡಿಯಾ ಚಿತ್ರವಾದ ಮ್ಯಾಕ್ಸ್ ಒಂದು ಮಾಸ್ ಚಿತ್ರವಾಗಿದ್ದು, ಟೀಸರ್’ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ.

ಇದನ್ನೂ ಓದಿ: ಕರ್ಕಾಟಕದಲ್ಲಿ ರೂಪುಗೊಂಡ ರಾಜಯೋಗಗಳಿಂದ ಈ 3 ರಾಶಿಯವರಿಗೆ ಭರ್ಜರಿ ಲಾಭ!

ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಮ್ಯಾಕ್ಸ್’ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News