ಕಿಚ್ಚ ಸುದೀಪ್‌ 'ಮಾರ್ಕ್' ಸಿನಿಮಾ ಡಿಸೆಂಬರ್ 25 ಕ್ಕೆ ರಿಲೀಸ್‌ ಫಿಕ್ಸ್

ಶೂಟಿಂಗ್ ಮುಗಿಸಿದ  ಮಾರ್ಕ್..ಪೋಸ್ಟ್ ಪ್ರೊಡಕ್ಷನ್ ನಲ್ಲಿ ಕಿಚ್ಚನ ಚಿತ್ರ..ಡಿಸೆಂಬರ್ 25ಕ್ಕೆ ಸಿನಿಮಾ ಎಂಟ್ರಿ ಕನ್ಫರ್ಮ್

Written by - Chetana Devarmani | Last Updated : Nov 13, 2025, 11:13 PM IST
  • ಶೂಟಿಂಗ್ ಮುಗಿಸಿದ ಮಾರ್ಕ್
  • ಪೋಸ್ಟ್ ಪ್ರೊಡಕ್ಷನ್ ನಲ್ಲಿ ಕಿಚ್ಚನ ಚಿತ್ರ
  • ಡಿಸೆಂಬರ್ 25ಕ್ಕೆ ಸಿನಿಮಾ ಎಂಟ್ರಿ ಕನ್ಫರ್ಮ್
ಕಿಚ್ಚ ಸುದೀಪ್‌ 'ಮಾರ್ಕ್' ಸಿನಿಮಾ ಡಿಸೆಂಬರ್ 25 ಕ್ಕೆ ರಿಲೀಸ್‌ ಫಿಕ್ಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿರುವ 'ಮಾರ್ಕ್' ಸಿನಿಮಾದ ಟೀಸರ್ ಈಗಾಗಲೇ ದಾಖಲೆ‌ ಬರೆದಿದೆ. ಕಿಚ್ಚನ ಆಕ್ಷನ್ ಖದರ್ ನೋಡಿ ಥ್ರಿಲ್ಲರ್ ಆಗಿರುವ ಸುದೀಪಿಯನ್ಸ್ ಗೆ ಚಿತ್ರತಂಡ ಈಗ ಮತ್ತೊಂದು ಕ್ರೇಜಿ ಅಪ್ ಡೇಟ್ ಕೊಟ್ಟಿದೆ. 

Add Zee News as a Preferred Source

ಮಾರ್ಕ್ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೊನೆ ಹಂತದ ಚಿತ್ರೀಕರಣ ಮುಗಿಸಿ‌ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ತೊಡಗಿಸಿಕೊಂಡಿದೆ. 

'ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ಮೋಡಿ ಮಾಡಿತ್ತು. ಈಗ ಮತ್ತೆ ಅವರಿಬ್ಬರು ‘ಮಾರ್ಕ್’ ಸಿನಿಮಾದ ಮೂಲಕ ರಂಜಿಸಲು ಬರುತ್ತಿದ್ದಾರೆ. ‘ಮ್ಯಾಕ್ಸ್’ ರೀತಿಯೇ ಈ ಬಾರಿ ಕೂಡ ಪೊಲೀಸ್ ಆಫೀಸರ್ ಪಾತ್ರದಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಅದ್ಧೂರಿಯಾಗಿ ರಿಲೀಸ್ ಆಗಲಿದೆ.

'ಮಾರ್ಕ್’ ಸಿನಿಮಾಗೆ ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಅಜಯ್ ಮಾರ್ಕಂಡೆ ಎಂಬ ಪಾತ್ರವನ್ನು ಸುದೀಪ್ ಮಾಡಿದ್ದಾರೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಹಾಗೂ ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜತೆಯಾಗಿ ಈ ‘ಮಾರ್ಕ್’ ಚಿತ್ರವನ್ನು ನಿರ್ಮಿಸಿವೆ.

ಇದನ್ನೂ ಓದಿ : ರಜನಿಕಾಂತ್‌-ಕಮಲ್‌ ಹಾಸನ್‌ ಸಿನಿಮಾಗೆ ಪ್ರಾರಂಭದಲ್ಲೇ ವಿಘ್ನ! ಚಿತ್ರತಂಡದಿಂದ ಏಕಾಏಕಿ ಹೊರ ನಡೆದ ನಿರ್ದೇಶಕ

ಇದನ್ನೂ ಓದಿ : ಕೇವಲ 'SSMB29' ರಿಲೀಸ್‌ ಇವೆಂಟ್‌ಗೆ ಖರ್ಚಾಗುವ ಹಣವೇಷ್ಟು ಗೊತ್ತೆ? ಆ ಹಣದಲ್ಲೇ 4-5 ಸಿನಿಮಾ ಮಾಡಬಹುದು

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News